ಕನ್ನಡಪ್ರಭ ವಾರ್ತೆ ಗುಡಿಬಂಡೆ
ಈ ಸಂಬಂಧ ತಾಲೂಕು ಕಚೇರಿ ಮುಂಭಾಗ ಸಿಪಿಎಂ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಿಂಗಳಿಗೆ ಲಕ್ಷಾಂತರ ರುಪಾಯಿ ಸಂಭಾವನೆ ಪಡೆಯುವ ಶಾಸಕರಿಗಿಲ್ಲದ ನಿಯಮ, ವರ್ಷಕ್ಕೆ ಕೇವಲ 1.20 ಲಕ್ಷ ರು. ಆದಾಯವಿರುವ ಬಡ ಕುಟುಂಬಗಳಿಗೆ ಅನ್ವಯವಾಗುತ್ತಿರುವುದು ದುರಂತ. ಹಿಂದುಳಿದ ಗುಡಿಬಂಡೆ ತಾಲೂಕಿನಲ್ಲಿ ಕೂಲಿ ಕಾರ್ಮಿಕರು ಮತ್ತು ಹೈನುಗಾರರನ್ನೇ ಅವಲಂಬಿಸಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದುಪಡಿಸಿರುವುದು ಅವರ ಶಿಕ್ಷಣ ಮತ್ತು ಆರೋಗ್ಯದ ಹಕ್ಕನ್ನು ಕಸಿದುಕೊಂಡಂತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮತ್ತೊಬ್ಬ ಮುಖಂಡ ಉಪ್ಪಾರಹಳ್ಳಿ ಶ್ರೀನಿವಾಸ್ ಮಾತನಾಡಿ, ತಾಲೂಕಿನಲ್ಲಿ ಒಟ್ಟು 669 ಪಡಿತರ ಚೀಟಿಗಳು ರದ್ದಾಗಿವೆ. ತಾಲೂಕು ಕಚೇರಿಗೆ ಆಹಾರ ನಿರೀಕ್ಷಕರು ತಿಂಗಳಿಗೆ ಒಂದೆರಡು ಬಾರಿ ಮಾತ್ರ ಬರುತ್ತಿರುವುದರಿಂದ ದಲ್ಲಾಳಿಗಳ ಹಾವಳಿ ಮಿತಿಮೀರಿದೆ. ಹೊಸ ಪಡಿತರ ಚೀಟಿಗಾಗಿ ಬಡವರಿಂದ 4 ಸಾವಿರದಿಂದ ದಿಂದ 5 ಸಾವಿರ ರು.ಗಳವರೆಗೆ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.ಈ ವೇಳೆ ಸಿಪಿಎಂ ಪಕ್ಷದ ತಾಲೂಕು ಕಾರ್ಯದರ್ಶಿ ವೆಂಕಟರಾಜು, ಮುಖಂಡರಾದ ರಮಣ, ಶಿವಪ್ಪ, ಶ್ರೀನಿವಾಸರೆಡ್ಡಿ, ಆದಿನಾರಾಯಣಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು.
16ಜಿಯುಡಿ1: ರೇಷನ್ ಕಾರ್ಡ್ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಪಿಎಂ ಪಕ್ಷದ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.