ಕನ್ನಡಪ್ರಭ ವಾರ್ತೆ ಬಂಟ್ವಾಳ
* 16ರಂದು ಬ್ರಹ್ಮರಥೋತ್ಸವ:
ಮಾ.16ರಂದು 200ನೇ ವರ್ಷಾಚರಣೆಯ ಬ್ರಹ್ಮರಥೋತ್ಸವ ನಡೆಯಲಿದೆ. ಸಂಜೆ 4.30ಕ್ಕೆ ಯಜ್ಞಾರತಿ, ಪೂರ್ಣಾಹುತಿ ಬಲಿ ಬಳಿಕ ಸಂಜೆ 5.30ಕ್ಕೆ ಬ್ರಹ್ಮರಥಾರೋಹಣ, ಸಮಾರಾಧನೆ, ರಾತ್ರಿ 1 ಗಂಟೆಗೆ ಬ್ರಹ್ಮರಥೋತ್ಸವ ನಡೆಯಲಿದೆ. ಮಾ.17ರಂದು ಶ್ರೀಗಳಿಂದ ಸಭಾ ಕಾರ್ಯಕ್ರಮ ಪ್ರವಚನ ನಡೆಯಲಿದೆ. ಅವಭೃತೋತ್ಸವ ಕಾರ್ಯಕ್ರಮಗಳು ಅಂದು ನಡೆಯಲಿವೆ. ದೇವಳ ವತಿಯಿಂದ ನಡೆಯುತ್ತಿರುವ ಶಾಲೆಗೆ ಎರಡು ಬಸ್‌ಗಳನ್ನು ಈ ಸಂದರ್ಭ ಕೊಡುಗೆಯಾಗಿ ನೀಡಲಾಗುವುದು. ರಥೋತ್ಸವ ಕಾರ್ಯಕ್ರಮದ ಅಂಗವಾಗಿ ವಿಶೇಷವಾಗಿ ಪಟ್ಟದ ದೇವರಿಗೆ 50 ಪವನ್ ಚಿನ್ನ ಹಾಗೂ ಉತ್ಸವ ಮೂರ್ತಿಗೆ 50 ಪವನ್ ಚಿನ್ನ, ಕಾಶಿಮಠಕ್ಕೆ ಚಿನ್ನದ ಸರ ಹಾಗೂ ಬ್ರಹ್ಮರಥಕ್ಕೆ 10 ಕೆ.ಜಿ. ಬೆಳ್ಳಿಯ ಪ್ರಭಾವಳಿ ನೀಡಲಾಗುತ್ತದೆ.ಶೈಕ್ಷಣಿಕವಾಗಿಯೂ ಅನೇಕ ಕೊಡುಗೆಗಳನ್ನು ಕ್ಷೇತ್ರದ ವತಿಯಿಂದ ನೀಡುತ್ತಿದ್ದು, ಈಗಾಗಲೇ ಪ್ರಾಥಮಿಕ ಹಾಗೂ ಹೈಸ್ಕೂಲ್ ವರೆಗೆ ಶಿಕ್ಷಣ ನೀಡಲಾಗುತ್ತಿದೆ. ಮುಂದಿನ ಅವಧಿಯಲ್ಲಿ ಪಿ.ಯು. ಕಾಲೇಜು ಆರಂಭಿಸಲಿದ್ದೇವೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮೊಕ್ತೇಸರರಾದ ಭಾಮಿ ನಾಗೇಂದ್ರನಾಥ ಶೆಣೈ, ಬಿ.ಸುರೇಶ್ ಬಾಳಿಗಾ, ಪ್ರಮುಖರಾದ ವಸಂತ ಪ್ರಭು, ಶಿವಾನಂದ ಬಾಳಿಗಾ, ಬಸ್ತಿ ಮಾಧವ ಶೆಣೈ ಉಪಸ್ಥಿತರಿದ್ದರು.