ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

KannadaprabhaNewsNetwork |  
Published : Jan 06, 2025, 01:00 AM IST
ಕಾರ್ನಾಡ್:ಶ್ರೀ ಹರಿಹರ ಶ್ರೀ ವಿಷ್ಟುಮೂರ್ತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ | Kannada Prabha

ಸಾರಾಂಶ

ಕ್ಷೇತ್ರದ ಅರ್ಚಕರಾದ ಹಯಗ್ರೀವ ಪಡ್ಡಿಲ್ಲಾಯ, ರಾಜಾರಾಮ್ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.

ಕನ್ನಡಪ್ರಭವಾರ್ತೆ ಮೂಲ್ಕಿ

ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರದಿಂದ ಜನರಲ್ಲಿ ಸಂಘಟನೆ ಹಾಗೂ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದು ಸಂಸದ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಹೇಳಿದರು.

ಫೆಬ್ರವರಿ 12 ರಿಂದ 17 ರ ವರೆಗೆ ನಡೆಯಲಿರುವ ಮೂಲ್ಕಿಯ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಕ್ಷೇತ್ರದ ಸಭಾಭವನದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಕ್ಷೇತ್ರದ ಅರ್ಚಕರಾದ ಹಯಗ್ರೀವ ಪಡ್ಡಿಲ್ಲಾಯ, ರಾಜಾರಾಮ್ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.

ಈ ಸಂದರ್ಭ ಬಪ್ಪನಾಡು ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಹಾಗೂ ಕ್ಷೇತ್ರದ ಆಡಳಿತ ಮೊಕ್ತೇಸರ ಅರವಿಂದ ಪೂಂಜ, ಸದಸ್ಯರಾದ ಸುನಿಲ್ ಆಳ್ವ, ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್, ಸದಸ್ಯೆ ರಾಧಿಕಾ ಕೋಟ್ಯಾನ್, ಸುಭಾಷ್ ಶೆಟ್ಟಿ, ಕಾರ್ನಾಡ್ ಹರಿಹರ ಯುವಕ ವೃಂದದ ಅಧ್ಯಕ್ಷ ಹರ್ಷ ರಾಜ ಶೆಟ್ಟಿ, ವೈ ಎನ್ ಸಾಲ್ಯಾನ್, ನಾಗೇಶ್ ಬಪ್ಪನಾಡು, ಸುರೇಶ್ ರಾವ್, ಮೂಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಪ್ರವೀಣ್ ಕೋಟ್ಯಾನ್, ಚಂದ್ರಶೇಖರ ಸುವರ್ಣ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ನಿಶ್ಮಿತಾ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರವಿಕುಮಾರ್, ಶಶೀಂದ್ರ ಸಾಲ್ಯಾನ್, ರಾಘವೇಂದ್ರ ಟಿ, ನೂತನ್ ಶೆಟ್ಟಿ ಭಕ್ತಾದಿಗಳು ಉಪಸ್ಥಿತರಿದ್ದರು.

ಈ ಸಂದರ್ಭ ಕ್ಷೇತ್ರಕ್ಕೆ ಆಗಮಿಸಿದ ಸಂಸದ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರನ್ನು ದೇವಸ್ಥಾನದ ವತಿಯಿಂದ ಅರವಿಂದ ಪೂಂಜಾ ಅವರು ಗೌರವಿಸಿದರು.

ಬಳಿಕ ಗ್ರಾಮಸ್ಥರ, ಸಂಘ ಸಂಸ್ಥೆಗಳು, ಸದಸ್ಯರ, ಸಮಿತಿ ಸದಸ್ಯರ ಸಮಾಲೋಚನಾ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ