ಕನ್ನಡಪ್ರಭ ವಾರ್ತೆ ಮೂಲ್ಕಿ
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಬ್ರಹ್ಮ ರಥೋತ್ಸವದ ಪ್ರದಕ್ಷಿಣೆ ಸಮಯದಲ್ಲಿ ನಡೆದ ಅವಘಡದ ಹಿನ್ನೆಲೆಯಲ್ಲಿ ಬಪ್ಪನಾಡು ಕ್ಷೇತ್ರದಲ್ಲಿ ದೈವಜ್ಞ ವಳಕ್ಕುಂಜ ಮುರಳಿ ಕೃಷ್ಣಶರ್ಮ ನೇತೃತ್ವದಲ್ಲಿ ಅಷ್ಟಮಂಗಳ ಪ್ರಶ್ನೆಗೆ ಬುಧವಾರ ಚಾಲನೆ ನೀಡಲಾಯಿತು.ಬೆಳಗ್ಗೆ ಕ್ಷೇತ್ರದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅತ್ತೂರು ಬೈಲು ವೆಂಕಟರಾಜ ಉಡುಪ, ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ಪೌರೋಹಿತ್ಯದಲ್ಲಿ ವಿಶೇಷ ಪ್ರಾರ್ಥನೆ ನಡೆದು ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರ ನೇತೃತ್ವದಲ್ಲಿ ವಾದ್ಯ ಘೋಷದೊಂದಿಗೆ ದೈವಜ್ಞರನ್ನು ದೇವಸ್ಥಾನಕ್ಕೆ ಕರೆ ತರಲಾಯಿತು .
ಬಳಿಕ ಕನ್ನಿಕೆಯಿಂದ ರಾಶಿ ಪೂಜೆ ಹಾಗೂ ಸ್ವರ್ಣ ನಿಕ್ಷೇಪದ ಮೂಲಕ ಅಷ್ಟಮಂಗಳ ಪ್ರಶ್ನೆಗೆ ಚಾಲನೆ ನೀಡಲಾಯಿತು.ಪ್ರಶ್ನೆಯಲ್ಲಿ ಕಂಡು ಬಂದ ಧನು ರಾಶಿಯಿಂದ ಶುಭ ಸೂಚನೆ ಬಂದಿದ್ದು ಗುರು ಬಲ ಇದ್ದರೂ ದೇವಸ್ಥಾನದಲ್ಲಿ ಕಿಂಚಿತ್ ದೋಷಗಳಿದ್ದು ಪ್ರಾಯಶ್ಚಿತ್ತ ಮಾಡಿದರೆ ಮುಂದಿನ ದಿನಗಳಲ್ಲಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ದೈವಜ್ಞರು ನುಡಿದರು.
ಜೂ.23ರಿಂದ ನಿರಂತರವಾಗಿ ಅಷ್ಟಮಂಗಳ ಪ್ರಶ್ನಾ ಚಿಂತನೆ ನಡೆಯಲಿದೆ ಎಂದು ಕ್ಷೇತ್ರದ ಒಂಬತ್ತು ಮಹಾಗಣೆಯ ಭಕ್ತರಿಗೆ ತಿಳಿಸಲಾಯಿತು.ದೇವಳದ ಕಾರ್ಯ ನಿರ್ವಹಣಾಧಿಕಾರಿ ಶ್ವೇತ ಪಳ್ಳಿ, ಜ್ಯೋತಿಷ್ಯ ವಿದ್ವಾನ್ ವಾಸುದೇವ ಭಟ್ ಪಾವಂಜೆ, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಕಾಡಿ, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಅತುಲ್ ಕುಡ್ವ, ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಅರ್ಚಕ ಅಪ್ಪುಯಾನೆ ಶ್ರೀನಿವಾಸ ಪೂಜಾರಿ, ಶಾಸಕ ಉಮಾನಾಥ ಕೋಟ್ಯಾನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಧಾರ್ಮಿಕ ಪರಿಷತ್ ಸದಸ್ಯ ಸುಬ್ರಮಣ್ಯ ಪ್ರಸಾದ್ ಕೊರಿಯಾರ್, ಮಾಜಿ ಸದಸ್ಯ ಭುವನಾಭಿರಾಮ ಉಡುಪ, ಉದ್ಯಮಿ, ಅರವಿಂದ ಪೂಂಜಾ ಕಾರ್ನಾಡ್, ರಾಮಚಂದ್ರ ನಾಯಕ್ ಕೋಲ್ನಾಡುಗುತ್ತು, ಶರತ್ ಸಾಲ್ಯಾನ್, ಗುತ್ತಿನಾರ್ ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಚಂದ್ರಶೇಖರ ಕಾಸಪ್ಪಯ್ಯನವರ ಮನೆ, ಸುಜಿತ್ ಸಾಲ್ಯಾನ್, ಕಿರಣ್ ಶೆಟ್ಟಿ ಕೋಲ್ನಾಡ್ ಗುತ್ತು , ಸುನಿಲ್ ಆಳ್ವ, ಗುರುವಪ್ಪ ಕೋಟ್ಯಾನ್, ಶೇಖರ ಶೆಟ್ಟಿ ಕಿಲ್ಪಾಡಿ ಭಂಡಸಾಲೆ, ಸುಕುಮಾರ್ ಶೆಟ್ಟಿ, ಮೂಲ್ಕಿ ನ.ಪಂ. ಅಧ್ಯಕ್ಷ ಸತೀಶ್ ಅಂಚನ್, ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಹರಿಶ್ಚಂದ್ರ ಪಿ ಸಾಲ್ಯಾನ್, ಗೌತಮ್ ಜೈನ್ ಮುಲ್ಕಿ ಅರಮನೆ, ನಾಗೇಶ್ ಬಪ್ಪನಾಡು, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಸತೀಶ್ ಭಂಡಾರಿ, ವಿನೋದ್ ಸಾಲ್ಯಾನ್ ಬೆಳ್ಳಾಯರು, ಅಕೌಂಟೆಂಟ್ ಶಿವಶಂಕರ್ ಮತ್ತಿತರರು ಇದ್ದರು.