ಕನ್ನಡಪ್ರಭ ವಾರ್ತೆ ಬ್ರಹ್ಮಾವರ
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಪ್ರೊ. ಭಾಸ್ಕರ್ ಶೆಟ್ಟಿ ಎಸ್. ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ನಿರಂತರ ಅಭ್ಯಾಸದ ಮೂಲಕ ಯಶಸ್ಸು ಗಳಿಸಲು ಸಾಧ್ಯ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಉದ್ಯಮಿ ಸುಜಯ್ ಶೆಟ್ಟಿ ತೆಕ್ಕಟ್ಟೆ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ. ಕ್ರೀಡೆಯಲ್ಲಿ ಯಶಸ್ಸು ಗಳಿಸಲು ಪೂರ್ವಸಿದ್ಧತೆ ಅಗತ್ಯ ಎಂದು ಹೇಳಿದರು.ದೈಹಿಕ ಶಿಕ್ಷಣ ನಿರ್ದೇಶಕಿ ಸುಮತಿ ಸ್ವಾಗತಿಸಿದರು. ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಪಾಪಣ್ಣ ವಂದಿಸಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಲೋಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿ ಬಾರ್ಕೂರು ರೋಟರಿ ಕ್ಲಬ್ ಅಧ್ಯಕ್ಷ ಗಣೇಶ ಶೆಟ್ಟಿ ವಿಜೇತ ತಂಡಗಳಿಗೆ ಬಹುಮಾನವನ್ನು ವಿತರಿಸಿದರು.