ಬ್ರಹ್ಮಾವರ: ಜಿ.ಎಂ. ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

KannadaprabhaNewsNetwork |  
Published : Jan 30, 2025, 12:33 AM IST
29ಜಿಎಂಎಸ್‌ | Kannada Prabha

ಸಾರಾಂಶ

ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ನಂತರ ಶಾಲಾ ವಾರ್ಷಿಕ ಸಂಚಿಕೆ ಪರಿಕ್ರಮ ಮತ್ತು ಜಿ.ಎಂ. ಟೈಮ್ಸನ್ನು ಅತಿಥಿಗಳು ಬಿಡುಗಡೆಗೊಳಿಸಿದರು.

ಕನ್ನಡಪ್ರಭ ವಾರ್ತೆ ಬ್ರಹ್ಮಾವರ

ಇಲ್ಲಿನ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಸೈಂಟ್ ಜೋಸೆಫ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ಜೆ. ಜೋಸೆಫ್‌ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಜಿ.ಎಂ. ಸಂಸ್ಥೆ ನಿಮಗೆ ಉತ್ತಮ ಆಕಾರವನ್ನು ಕೊಟ್ಟು ಪ್ರಜ್ವಲಿಸುವಂತೆ ಮಾಡಿದೆ. ಇಲ್ಲಿ ಪಡೆದ ಜ್ಞಾನವನ್ನು ವಿವೇಕದಿಂದ ಉಪಯೋಗಿಸಬೇಕು. ಪ್ರತಿಯೊಬ್ಬರು ಶಿಸ್ತು, ಮೌಲ್ಯಗಳೊಂದಿಗೆ ಗುರಿಯತ್ತ ಸಾಗಬೇಕು ಎಂದರು.

ಸಂಸ್ಥೆಯ ಹಳೆ ವಿದ್ಯಾರ್ಥಿನಿ ಡಾ. ರಿತಿಕಾ ಶೆಟ್ಟಿ ಮಾತನಾಡಿ, ಈ ಸ್ಪರ್ಧಾತ್ಮಕ ಯುಗದಲ್ಲಿ ನಾವು ಸಮಯವನ್ನು ವ್ಯರ್ಥಮಾಡದೇ ಆತ್ಮಸ್ಥೈರ್ಯದೊಂದಿಗೆ ಸಾಧನೆಯತ್ತ ಮುನ್ನುಗ್ಗಬೇಕು ಎಂದರು.ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿ, ಎಲ್ಲರೂ ತಮ್ಮ ಪೋಷಕರ ಮುಖದಲ್ಲಿ ನಗುವನ್ನು, ಅವರು ಹೆಮ್ಮೆ ಪಡುವಂತಹ ಕೆಲಸವನ್ನು ಮಾಡಬೇಕು. ಹಾಗೆಯೇ ಭವಿಷ್ಯದಲ್ಲಿ ನಿಮ್ಮ ಸಾಧನೆಗಳನ್ನು ನಮ್ಮೊಂದಿಗೆ ಹಂಚಿಕೊಂಡಾಗ ಸಾರ್ಥಕತೆಯ ಭಾವನೆ ಉಂಟಾಗುತ್ತದೆ ಎಂದು ಹೇಳಿದರು.

ಶಾಲಾ ಪ್ರಾಂಶುಪಾಲ ಜಾರ್ಜ್ ಕುರಿಯನ್, ಮಕ್ಕಳ ಅಂತಿಮ ಪರೀಕ್ಷೆಗೆ, ಜೀವನಕ್ಕೆ ಶುಭಹಾರೈಸಿದರು.ನಂತರ ಶಾಲಾ ವಾರ್ಷಿಕ ಸಂಚಿಕೆ ಪರಿಕ್ರಮ ಮತ್ತು ಜಿ.ಎಂ. ಟೈಮ್ಸನ್ನು ಅತಿಥಿಗಳು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಜಿ.ಎಂ. ಗ್ಲೋಬಲ್ ಸ್ಕೂಲ್‌ನ ಪ್ರಾಂಶುಪಾಲ ಪ್ರಣವ್ ಶೆಟ್ಟಿ, ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷೆ ಡಾ. ಅನುಷಾ ಸುಬ್ರಹ್ಮಣ್ಯಂ, ಶ್ರೀಮಾ ಪ್ರಣವ್ ಶೆಟ್ಟಿ, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೀದಿ ನಾಯಿ ಮರಿ ದತ್ತು ಪಡೆದು ಮಾನವೀಯತೆ ತೋರಿ
5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಕಡ್ಡಾಯ