ಬ್ರಹ್ಮಾವರ ಜಿಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌: ಶಿಕ್ಷಕರ ದಿನಾಚರಣೆ

KannadaprabhaNewsNetwork |  
Published : Sep 06, 2025, 01:01 AM IST
05ಜಿಎಂ | Kannada Prabha

ಸಾರಾಂಶ

ಬ್ರಹ್ಮಾವರ ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.

ಬ್ರಹ್ಮಾವರ: ಇಲ್ಲಿನ ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಅವರು ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯ ತಿಳಿಸಿ, ವಿದ್ಯಾರ್ಥಿಗಳಿಗೆ ಎಲ್ಲಕ್ಕಿಂತ ಶ್ರೇಷ್ಠವಾದ ಪದ, ವೃತ್ತಿ, ಸನ್ಮಾರ್ಗವನ್ನು ತೋರಿಸುವವನು ಗುರು ಎಂದು. ಗುರು ಎಂಬ ಪದದ ಮಹತ್ವವನ್ನು ತಿಳಿಸಿದರು. ಶಿಕ್ಷಕರಿಗೆ ಬೋಧನೆಯಲ್ಲಿ ಹೊಸ ಹೊಸ ಬೋಧನಾ ವಿಧಾನ, ಕೌಶಲ ಮತ್ತು ಜ್ಞಾನವನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಅವರು ಶಿಕ್ಷಕರಿಂದ ಪ್ರತಿಜ್ಞೆ ಸ್ವೀಕರಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಮುಂದೆ ಗುರು ಇರಬೇಕು, ಹಿಂದೆ ಗುರಿ ಇರಬೇಕು. ನಮ್ಮ ಸಂಸ್ಥೆಯು ಉತ್ತಮ ಶಿಕ್ಷಕ ವೃಂದದವರನ್ನು ಹೊಂದಿದ್ದು, ಅವರ ಮಾರ್ಗದರ್ಶನದಲ್ಲಿ ಕಲಿಯುವ ನಿಮ್ಮ ಭವಿಷ್ಯ ಉಜ್ವಲವಾಗುತ್ತದೆ ಎಂದು ಶುಭ ಹಾರೈಸಿದರು.

ವಿದ್ಯಾರ್ಥಿಗಳು ಶಿಕ್ಷಕರಿಗೆ ಶುಭಾಶಯ ಪತ್ರಗಳ ಮತ್ತು ಗಾಯನದ ಮೂಲಕ ಶಿಕ್ಷಕರ ದಿನಾಚರಣೆಯ ಶುಭಾಶಯ ತಿಳಿಸಿದರು. ಶಿಕ್ಷಕ ವೃಂದದವರು ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಶಿಕ್ಷಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಶಿಕ್ಷಕರಲ್ಲಿರುವ ಸೇವಾ ಮನೋಭಾವವನ್ನು ಗುರುತಿಸಿ ಸ್ಮರಣಿಕೆ ನೀಡಲಾಯಿತು. ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದೊಂದಿಗೆ ಓಣಂ ಹಬ್ಬವನ್ನು ಹೂವಿನ ರಂಗೋಲಿ ಹಾಕಿ, ದೀಪ ಬೆಳಗಿ, ಓಣಂ ಗೀತೆಯನ್ನು ಹಾಡುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯೆಯಾದ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಶಿಕ್ಷಕರು, ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸುವೆ
ಕೇಂದ್ರದ ಹೊಸ ಕಾರ್ಮಿಕ ಸಂಹಿತೆಗಳಿಗೆ ವಿರೋಧ