ಬ್ರಹ್ಮಾವರ: ಜಿ.ಎಂ.ನಲ್ಲಿ ‘ಈಜು ಕೊಳ’, ‘ಅಮ್ಯೂಸ್‌ಮೆಂಟ್ ಪಾರ್ಕ್’ ಉದ್ಘಾಟನೆ

KannadaprabhaNewsNetwork |  
Published : Apr 04, 2025, 12:50 AM IST
03ಜಿಎಂ | Kannada Prabha

ಸಾರಾಂಶ

ಬ್ರಹ್ಮಾವರ ಜಿ.ಎಂ. ಸಮೂಹ ವಿದ್ಯಾಸಂಸ್ಥೆಯಲ್ಲಿ ‘ಈಜು ಕೊಳ’ ಮತ್ತು ‘ಅಮ್ಯೂಸ್‌ಮೆಂಟ್ ಪಾರ್ಕ್’ನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಬ್ರಹ್ಮಾವರ

ಇಲ್ಲಿನ ಜಿ.ಎಂ. ಸಮೂಹ ವಿದ್ಯಾಸಂಸ್ಥೆಯಲ್ಲಿ ‘ಈಜು ಕೊಳ’ ಮತ್ತು ‘ಅಮ್ಯೂಸ್‌ಮೆಂಟ್ ಪಾರ್ಕ್’ನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಉದ್ಘಾಟಿಸಿದರು.

ಬಳಿಕ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಎಲ್ಲ ರೀತಿಯ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಈಜುಕೊಳ ಮತ್ತು ಮಕ್ಕಳ ಮನೋರಂಜನೆಗಾಗಿ ಅಮ್ಯೂಸ್‌ಮೆಂಟ್ ಪಾರ್ಕ್‌ನ್ನು ನೀಡುವ ನನ್ನ ಕನಸು ಸಾಕಾರಗೊಂಡಿದೆ ಎಂದರು.ಈಜುವಿಕೆಯು ಮನರಂಜನೆ, ವ್ಯಾಯಾಮ, ಚಿಕಿತ್ಸೆ ಮತ್ತು ಸ್ಪರ್ಧಾತ್ಮಕ ಕ್ರೀಡೆಗಳಲ್ಲಿ ಭಾಗವಹಿಸುವುದು, ದೈಹಿಕ ಮತ್ತು ಮಾನಸಿಕ ಒತ್ತಡಗಳ ನಿವಾರಣೆಯಂತಹ ಪ್ರಯೋಜನಗಳನ್ನು ನೀಡುತ್ತದೆ. ಇಲ್ಲಿ ನುರಿತ ತರಬೇತುದಾರರಿಂದ ಮಕ್ಕಳಿಗೆ ಈಜು ಕಲಿಸುವುದರ ಜೊತೆಯಲ್ಲಿ ಅವರ ಮನೋರಂಜನೆಗಾಗಿ ಅಮ್ಯೂಸ್‌ಮೆಂಟ್ ಪಾರ್ಕ್‌ನ್ನು ಸಹ ಸಿದ್ಧಗೊಳಿಸಲಾಗಿದೆ. ಇದರಲ್ಲಿ ತರಬೇತಿ ಪಡೆದ ಮಕ್ಕಳು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕವನ್ನು ಗೆಲ್ಲುವಂತಾಗಲಿ ಎಂದು ಶುಭ ಹಾರೈಸಿದರು.ಜಿ.ಎಂ. ಗ್ಲೋಬಲ್ ಸ್ಕೂಲ್‌ನ ಪ್ರಾಂಶುಪಾಲ ಪ್ರಣವ್ ಶೆಟ್ಟಿ, ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲ ಜಾರ್ಜ್ ಕುರಿಯನ್, ಪೋಷಕರ ಹಾಗೂ ಮಕ್ಕಳ ಉತ್ತಮ ಪ್ರತಿಕ್ರಿಯೆಗೆ ಅಭಿನಂದಿಸಿ ಶುಭ ಹಾರೈಸಿದರು.ಏ.೨ರಿಂದ ೨೦ರ ವರೆಗೆ ಮೊದಲ ಬ್ಯಾಚ್ ಈಗಾಗಲೇ ಪ್ರಾರಂಭಗೊಂಡು ಪೋಷಕರು ಹಾಗೂ ಮಕ್ಕಳಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ. ಪ್ರತಿ ದಿನ ಬೆಳಗ್ಗೆ ೭.೩೦ರಿಂದ ತರಬೇತಿಯನ್ನು ನೀಡಲಾಗುತ್ತಿದ್ದು, ಈಜು ಕೊಳದಲ್ಲಿ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ