ಬ್ರಹ್ಮಾವರ ಜಿ.ಎಂ. ಶಾಲೆಯಲ್ಲಿ ಶಿಕ್ಷಕರಿಗೆ ಕೌಶಲ್ಯಾವೃದ್ಧಿ ಕಾರ್ಯಾಗಾರ

KannadaprabhaNewsNetwork |  
Published : Jun 10, 2025, 03:29 AM IST
9ಜಿಎಂ | Kannada Prabha

ಸಾರಾಂಶ

ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರಿಗೆ ರಾಷ್ಟ್ರೀಯ ಪಠ್ಯ ಕ್ರಮದ ಚೌಕಟ್ಟು ವಿಷಯದ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾಪು ಬೆಳ್ಮಣ್‌ನ ಶ್ರೀ ಲಕ್ಷ್ಮೀ ಜನಾರ್ಧನ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ಪ್ರಾಂಶುಪಾಲ ಭುಜಂಗ ಪಿ. ಶೆಟ್ಟಿ ಹಾಗೂ ಸುರತ್ಕಲ್ ವಿದ್ಯಾದಾಯಿನಿ ಆಂಗ್ಲ ಮಾಧ್ಯಮ ಶಾಲೆಯ ಶುಭಲಕ್ಷ್ಮಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

ಕನ್ನಡಪ್ರಭ ವಾರ್ತೆ ಬ್ರಹ್ಮಾವರ

ಇಲ್ಲಿನ ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರಿಗೆ ರಾಷ್ಟ್ರೀಯ ಪಠ್ಯ ಕ್ರಮದ ಚೌಕಟ್ಟು ವಿಷಯದ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕಾಪು ಬೆಳ್ಮಣ್‌ನ ಶ್ರೀ ಲಕ್ಷ್ಮೀ ಜನಾರ್ಧನ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ಪ್ರಾಂಶುಪಾಲ ಭುಜಂಗ ಪಿ. ಶೆಟ್ಟಿ ಹಾಗೂ ಸುರತ್ಕಲ್ ವಿದ್ಯಾದಾಯಿನಿ ಆಂಗ್ಲ ಮಾಧ್ಯಮ ಶಾಲೆಯ ಶುಭಲಕ್ಷ್ಮಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.ಕಾರ್ಯಾಗಾರದಲ್ಲಿ ರಾಷ್ಟ್ರೀಯ ಪಠ್ಯ ಕ್ರಮದ ಚೌಕಟ್ಟು ೨೦೨೩ ಇದರ ಗುರಿ, ಉದ್ದೇಶ, ಬೋಧನಾ ಕಲಿಕಾ ವಿಧಾನ, ಪಠ್ಯವಿಷಯಗಳ ಮಾಹಿತಿಯನ್ನು ನೀಡಿ ಬೋಧನಾ ಸಾಮರ್ಥ್ಯ ವೃದ್ಧಿಯ ತರಬೇತಿಯನ್ನು ನೀಡಲಾಯಿತು.ಈ ಸಂದರ್ಭ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಮುಗ್ಧ ಮನಸ್ಸಿನ ಮಕ್ಕಳ ಭವಿಷ್ಯವನ್ನು ರೂಪಿಸುವ ಶಿಕ್ಷಕರು ನಿರಂತರ ತಮ್ಮನ್ನು ತಾವು ಆಧುನೀಕರಿಸಿಕೊಳ್ಳಬೇಕು. ಇಲ್ಲಿ ಕಲಿತ ಕೌಶಲ್ಯಗಳನ್ನು ತರಗತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಕರೆ ನೀಡಿದರು.ಶಾಲಾ ಪ್ರಾಂಶುಪಾಲ ಜಾರ್ಜ್ ಕುರಿಯನ್, ಎಲ್ಲ ಶಿಕ್ಷಕರು ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಕುರಿತು ಅರಿವನ್ನು ಹೊಂದಿರಬೇಕೆಂದರು. ಕಾರ್ಯಾಗಾರದಲ್ಲಿ ಸಂಸ್ಥೆಯ ಶಿಕ್ಷಕ ವೃಂದದವರು ಪ್ರಾತ್ಯಕ್ಷಿಕ ಅನುಭವವನ್ನು ಪಡೆದುಕೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ