ಮೊಬೈಲ್ ಗೀಳಿನಿಂದ ಹೊರಬಂದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ

KannadaprabhaNewsNetwork |  
Published : Sep 11, 2025, 12:03 AM IST
10ಎಚ್ಎಸ್ಎನ್17: ಆಲೂರು ಮಿನಿ ಕ್ರೀಡಾಂಗಣದಲ್ಲಿ ಶಾಸಕ ಸಿಮೆಂಟ್ ಮಂಜು ರವರು ಕ್ರೀಡಾಜ್ಯೋತಿ ಸ್ವೀಕರಿಸಿ ಕ್ರೀಡೆಗೆ ಚಾಲನೆ ನೀಡಿದರು.  | Kannada Prabha

ಸಾರಾಂಶ

ಅವಶ್ಯಕ್ಕೆ ತಕ್ಕಂತೆ ಮಾತ್ರ ಮೊಬೈಲ್ ಉಪಯೋಗಿಸಬೇಕು. ದಿನದಲ್ಲಿ ಒಂದು ಗಂಟೆಯಾದರೂ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು ಮಾನಸಿಕ ಸದೃಢತೆ ಬೆಳಸಿಕೊಳ್ಳಬೇಕು. ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿ ಮಕ್ಕಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಗೆಲ್ಲುವ ಗುರಿ ಹೊಂದಬೇಕು. ಮುಂದಿನ ದಿನಗಳಲ್ಲಿ ಕ್ರೀಡಾಂಗಣಕ್ಕೆ ಮೂಲಭೂತ ಸೌಕರ್ಯ ನೀಡಲು ಗುರಿ ಹೊಂದಿದ್ದೇನೆ ಎಂದರು.

ಕನ್ನಡಪ್ರಭ ವಾರ್ತೆ ಆಲೂರು

ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.

ಪಟ್ಟಣದ ಮಿನಿ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ, ಶಿಕ್ಷಣ ಇಲಾಖೆ ಹಾಗೂ ಕೆ.ಪಿ.ಎಸ್. ಶಾಲೆ ರಾಯರಕೊಪ್ಪಲು ಇವರ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಅವಶ್ಯಕ್ಕೆ ತಕ್ಕಂತೆ ಮಾತ್ರ ಮೊಬೈಲ್ ಉಪಯೋಗಿಸಬೇಕು. ದಿನದಲ್ಲಿ ಒಂದು ಗಂಟೆಯಾದರೂ ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು ಮಾನಸಿಕ ಸದೃಢತೆ ಬೆಳಸಿಕೊಳ್ಳಬೇಕು. ಕ್ರೀಡೆಯಲ್ಲಿ ಭಾಗವಹಿಸುವ ಪ್ರತಿ ಮಕ್ಕಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಗೆಲ್ಲುವ ಗುರಿ ಹೊಂದಬೇಕು. ಮುಂದಿನ ದಿನಗಳಲ್ಲಿ ಕ್ರೀಡಾಂಗಣಕ್ಕೆ ಮೂಲಭೂತ ಸೌಕರ್ಯ ನೀಡಲು ಗುರಿ ಹೊಂದಿದ್ದೇನೆ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಬಿಇಒ ಕೃಷ್ಣೇಗೌಡ ಮಾತನಾಡಿ, ಯಾವುದೆ ಕ್ರೀಡೆಯಲ್ಲಿ ಸಾಧನೆ ಮಾಡಲು ಗುಣಮಟ್ಟದ ತರಬೇತಿ ಪಡೆಯುವದು ಅಗತ್ಯ. ಕ್ರೀಡೆಯಲ್ಲಿ ಸಾಧನೆ ಮಾಡುವ ಆಟಗಾರರಿಗೆ ಸದಾ ಪ್ರೋತ್ಸಾಹ ನೀಡುತ್ತೇವೆ. ಕ್ರೀಡೆಗಳಲ್ಲಿ ನಿರ್ಣಾಯಕ ನಿರ್ಣಯವನ್ನು ಎಲ್ಲರೂ ಗೌರವಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.ಸಮಾರಂಭದಲ್ಲಿ ದೈಹಿಕ ಶಿಕ್ಷಣಾಧಿಕಾರಿಗಳು, ಆಲೂರು ಸ್ಪೋರ್ಟ್ಸ್‌ ಕ್ಲಬ್ ಅಧ್ಯಕ್ಷ ನವೀನ್ ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ