-ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ । ಶಿಶುವಿನ ಕಾಳಜಿ ಕುರಿತು ಮಾಹಿತಿಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಐ.ಇ.ಸಿ ವಿಭಾಗದ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ತಾಯಿಗೂ ತನ್ನ ಮಗುವಿಗೆ ಸಾಕಾಗುವಷ್ಟು ಹಾಲನ್ನು ಉತ್ಪಾದಿಸುವ ಸಾಮರ್ಥ್ಯವಿರುತ್ತದೆ. ಎದೆಹಾಲು ಬರುತ್ತಿಲ್ಲವೆಂದು ಬಾಟಲಿ ಹಾಲು, ಗ್ರೆಪ್ ವಾಟರ್ ಅಥವಾ ಇನ್ಯಾವುದೇ ಪದಾರ್ಥಗಳನ್ನು ಕುಡಿಸಬಾರದು. ಈ ಬಗ್ಗೆ ಜಿಲ್ಲೆಯಾದ್ಯಂತ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಗನ್ನಾಥ್ ಮಾತನಾಡಿ, ಸುಸ್ಥಿರ ಜೀವನದ ಭದ್ರ ಅಡಿಪಾಯಕ್ಕಾಗಿ ಸ್ತನ್ಯಪಾನ ಪರಿಣಾಮಕಾರಿ ವಿಧಾನಗಳನ್ನು ಸದೃಢಗೊಳಿಸೋಣ ಎಂಬುದು ಈ ವರ್ಷದ ಘೋಷವಾಕ್ಯವಾಗಿದೆ. ತಾಯಿಯ ಎದೆಹಾಲು ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ತಿಳಿಸಿದರು.
ವೈದ್ಯಾಧಿಕಾರಿ ಡಾ.ಕ್ಷಿತಿಜ ಮಾತನಾಡಿ, ಎದೆಹಾಲು ಅಮೃತಕ್ಕೆ ಸಮಾನ. ಆದರೆ ಕೆಲವರು ಮಗುವಿನ ಆರೋಗ್ಯಕ್ಕೆ ಹಾನಿ ಉಂಟುಮಾಡುವ ಸಕ್ಕರೆ ನೀರು, ಬೆಲ್ಲದ ನೀರು ಅಥವಾ ಜೇನುತುಪ್ಪವನ್ನು ಮಗುವಿಗೆ ನೀಡುತ್ತಾರೆ. ಇಂತಹ ಮೂಢನಂಬಿಕೆಗಳಿಗೆ ಯಾರೂ ಬಲಿಯಾಗಬಾರದು. ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
----ಫೋಟೊ----
ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಐ.ಇ.ಸಿ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಲಕ್ಷ್ಮಿ ಮುಂಡಾಸ ಉದ್ಘಾಟಿಸಿ ಮಾತನಾಡಿದರು.