ಸ್ತನ್ಯಪಾನದಿಂದ ರೋಗ ನಿರೋಧಕ ಶಕ್ತಿ ವೃದ್ಧಿ

KannadaprabhaNewsNetwork |  
Published : Aug 07, 2024, 01:04 AM IST
ಸ್ತನ್ಯಪಾನದಿಂದ ನವಜಾತ ಶಿಶುವಿನ ರೋಗ ನಿರೋಧಕ ಶಕ್ತಿ ವೃದ್ಧಿ  | Kannada Prabha

ಸಾರಾಂಶ

ಮೈದಾಳ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ

ಕನ್ನಡಪ್ರಭ ವಾರ್ತೆ ತುಮಕೂರುನವಜಾತ ಶಿಶುಗಳು ಜನಿಸಿದ 1 ಗಂಟೆಯೊಳಗೆ ಸ್ತನ್ಯಪಾನ ಮಾಡಿಸುವುದರಿಂದ ಮಗುವಿನ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ ಎಂದು ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಶಿಧರ್ ಬಿ. ತಿಳಿಸಿದರು. ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ, ಆರೋಗ್ಯ ಇಲಾಖೆ ಹಾಗೂ ಮೈದಾಳ ಗ್ರಾಮ ಪಂಚಾಯತಿಯ ಸಹಯೋಗದಲ್ಲಿ ಮೈದಾಳ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.ಪ್ರಸಕ್ತ ವರ್ಷ ಅಂತರ ಕೊನೆಗೊಳಿಸಿ ಎಲ್ಲರೂ ಸ್ತನ್ಯಪಾನಕ್ಕೆ ಬೆಂಬಲಿಸಿ ಎಂಬ ಘೋಷವಾಕ್ಯದೊಂದಿಗೆ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಆಚರಿಸಲಾಗುತ್ತಿದೆ ಎಂದರಲ್ಲದೆ, ಸ್ತನ್ಯಪಾನದ ಮಹತ್ವದ ಬಗ್ಗೆ ತಾಯಂದಿರಿಗೆ ಮಾಹಿತಿ ನೀಡಿದರು. ಊರ್ಡಿಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಶೃತಿ ಮಾತನಾಡಿ ಸ್ತನ್ಯಪಾನದಿಂದ ನವಜಾತ ಮಗುವಿನ ಸರ್ವತೋಮುಖ ಬೆಳವಣಿಗೆಯಾಗುತ್ತದೆ. ಸ್ತನ್ಯಪಾನಕ್ಕೆ ಸಂಬಂಧಿಸಿದಂತೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ನವ ವಿವಾಹಿತೆಯರು, ಗರ್ಭಿಣಿಯರು, ಹಾಲುಣಿಸುವ ತಾಯಂದಿರಿಗೆ ಮಾಹಿತಿ ನೀಡಿದರು. ಹೆರಿಗೆಯ ನಂತರ ಕನಿಷ್ಠ 1 ಗಂಟೆಯೊಳಗಾಗಿ ತಾಯಿ ತನ್ನ ಮಗುವಿಗೆ ಹಳದಿ ಬಣ್ಣದ ಗಿಣ್ಣು ಹಾಲನ್ನು ಉಣಿಸಬೇಕು. ಈ ಹಾಲಿನಲ್ಲಿ ಅತಿ ಹೆಚ್ಚು ರೋಗ ನಿರೋಧಕ ಶಕ್ತಿ ಇರುತ್ತದೆ. ಮಗುವಿಗೆ 6 ತಿಂಗಳು ತುಂಬುವತನಕ ತಾಯಿಯ ಎದೆ ಹಾಲನ್ನು ಹೊರತುಪಡಿಸಿ ಬೇರಾವುದೇ ಘನ ಅಥವಾ ದ್ರವ ಆಹಾರಗಳನ್ನು ತಿನಿಸಬಾರದು. ಎದೆ ಹಾಲಿನ ಜೊತೆಗೆ ಪೂರಕ ಪೌಷ್ಠಿಕ ಆಹಾರವನ್ನು 6 ತಿಂಗಳಿನಿಂದ 2 ವರ್ಷಗಳವರೆಗೆ ನಿಯಮಿತವಾಗಿ ಮಗುವಿಗೆ ನೀಡುವುದನ್ನು ಪ್ರಾರಂಭಿಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತ್ರಿವೇಣಿ, ಮೈದಾಳ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಮೋಹನ್‌ಕುಮಾರ್, ಪಂಚಾಯತಿ ಅಧ್ಯಕ್ಷ ರಮೇಶ್, ಉಪಾಧ್ಯಕ್ಷ ಗಂಗಮ್ಮ, ಅಂಗನವಾಡಿ ಮೇಲ್ವಿಚಾರಕರು ಹಾಗೂ ಕಾರ್ಯಕರ್ತೆಯರು ಹಾಜರಿದ್ದರು.

ಫೋಟೋ : ಮೈದಾಳ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ