ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಂಗಳವಾರ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ಹಮ್ಮಿಕೊಂಡಿದ್ದ ತಾಯಂದಿರಿಗೆ ಮಾಹಿತಿ ಹಾಗೂ ಕ್ವಿಜ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಈ ಬಾರಿಯ ಥೀಮ್ ಆಗಿರುವ ಎದೆಹಾಲು ಉಣಿಸುವ ಅಡೆ ತಡೆಗಳ ನಿವಾರಣೆ ಕುರಿತು ಮಾಹಿತಿ ನೀಡಿದರು. ತಾಯಿ ಮಗುವಿಗೆ ಎದೆ ಹಾಲು ಕುಡಿಸುವುದರಿಂದ ಮಗು ಮತ್ತು ತಾಯಿಯಲ್ಲಿ ಬಲವಾದ ಭಾವನಾತ್ಮಕ ಸಂಬಂಧ ಬೆಳೆಯುತ್ತದೆ ಎಂದು ಹೇಳಿದರು.
ತಾಯಂದಿರು ಮಗುವಿಗೆ ಎದೆ ಹಾಲು ಉಣಿಸಲು ಕುಟುಂಬದವರೂ ಕೂಡ ತಾಯಿಗೆ ಸಂಪೂರ್ಣ ಸಹಕಾರವನ್ನು ನೀಡಬೇಕು, ಎದೆ ಹಾಲನ್ನು ಉಣಿಸುವ ಬಗ್ಗೆ ತಿಳಿ ಹೇಳಬೇಕು ಹಾಗೂ ಅನಿವಾರ್ಯ ಸಂದರ್ಭ ಸಾರ್ವಜನಿಕ ಸ್ಥಳಗಳಲ್ಲಿ ಎದೆ ಹಾಲು ಉಣಿಸಲು ಮುಜುಗರಪಡಬಾರದು, ಈ ನಿಟ್ಟಿನಲ್ಲಿ ಪ್ರೋತ್ಸಾಹಿಸಬೇಕು, ಸರಕಾರವೂ ಕೂಡ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.ಡಾ.ಅನಿಲ್ ಕಲ್ಲೇಶ್ ಮಾತನಾಡಿ, ತಾಯಿ ಎದೆ ಹಾಲು ಕುಡಿಸುವುದರಿಂದ ಮಗುವಿನಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಮಗು ಆರೋಗ್ಯ ಪೂರ್ಣವಾಗಿರುತ್ತದೆ, ಮಗುವಿಗೆ ಅಗತ್ಯ ಇರುವ ಎಲ್ಲಾ ರೀತಿಯ ಪೋಷಕಾಂಶವು ದೊರೆಯುತ್ತದೆ, ಎದೆಹಾಲಿನಲ್ಲಿರುವ ಪ್ರೊಟೀನ್, ವಿಟಮಿನ್, ಕ್ಯಾಲ್ಸಿಯಂ, ಅಂಶಗಳು ಮಗುವಿನ ದೈಹಿಕ ಮಾನಸಿಕ ಬೆಳವಣಿಗೆಗೆ ಪೂರಕವಾಗುತ್ತದೆ ಎಂದರು.