ಶಿವಮೊಗ್ಗ ಎಪಿಎಂಸಿ ಇಬ್ಬರು ಅಧಿಕಾರಿಗಳು ₹50 ಸಾವಿರ ಲಂಚ ಸ್ವೀಕರಿಸುವ ವೇಳೆ ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ, ಹಿರಿಯ ಮೇಲ್ವಿಚಾರಕ ಯೋಗೀಶ್ ಆರೋಪಿಗಳು.
ಶಿವಮೊಗ್ಗ: ಎಪಿಎಂಸಿ ಇಬ್ಬರು ಅಧಿಕಾರಿಗಳು ₹50 ಸಾವಿರ ಲಂಚ ಸ್ವೀಕರಿಸುವ ವೇಳೆ ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ, ಹಿರಿಯ ಮೇಲ್ವಿಚಾರಕ ಯೋಗೀಶ್ ಆರೋಪಿಗಳು. ಎಪಿಎಂಸಿ ಮಳಿಗೆ ಮಂಜೂರು ಮಾಡಲು ₹2 ಲಕ್ಷ ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಈ ವಿಚಾರದಲ್ಲಿ ಎಪಿಎಂಸಿ ಕಾರ್ಯದರ್ಶಿ ₹1 ಲಕ್ಷಕ್ಕೆ ಮಾತುಕತೆ ನಡೆಸಿ, ₹50 ಸಾವಿರ ಲಂಚ ಸ್ವೀಕರಿಸುವ ವೇಳೆ ಕೋಡಿಗೌಡ, ಯೋಗೀಶ್ ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದಿದ್ದಾರೆ.
ಹೊಸನಗರ ತಾಲೂಕು ನೇರಲಿಗೆ ಗ್ರಾಮದ ರವೀಂದ್ರ ಎಂಬವರ ದೂರಿನ ಹಿನ್ನೆಲೆ ಈ ದಾಳಿ ನಡೆಸಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸಧ್ಯಕ್ಕೆ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.