ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಬೆಳ್ತಂಗಡಿ ಮಂಡಲದ ನಾರಾವಿ ಮತ್ತು ಅಳದಂಗಡಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ, ಅಳದಂಗಡಿ ಅರಮನೆ ತಿಮ್ಮಣ್ಣರಸ ಡಾ. ಪದ್ಮಪ್ರಸಾದ್ ಅಜಿಲ, ಸಾಮಾಜಿಕ ಮತ್ತು ಧಾರ್ಮಿಕ ಮುಂದಾಳು ವಸಂತ್ ಸಾಲಿಯಾನ್ ಕಾಪಿನಡ್ಕ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸಂತೋಷ್ ಕಾಪಿನಡ್ಕ ಅವರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದರು. ತುಳುನಾಡಿನ ಹೆಮ್ಮೆಯ ಯೋಧ ಕೆದಂಬಾಡಿ ರಾಮಯ್ಯ ಗೌಡ ಶೌರ್ಯ ಪ್ರಶಸ್ತಿ ಪುರಸ್ಕೃತ ಬೆಳ್ತಂಗಡಿಯ ಸುಬೇದಾರ್ ಏಕನಾಥ್ ಶೆಟ್ಟಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ಯೋಧ ನಮನ ಸಲ್ಲಿಸಿದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ , ಬಿಜೆಪಿ ಹಿರಿಯ ಮುಂದಾಳು ಕೆ. ಪ್ರಭಾಕರ ಬಂಗೇರ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು. ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಬಿಜೆಪಿ ಬೆಳ್ತಂಗಡಿ ಮಂಡಲದ ಕುವೆಟ್ಟು ಮತ್ತು ಕಣಿಯೂರು ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹರಿಕೃಷ್ಣ ಬಂಟ್ವಾಳ, ಜಯಂತ ಕೋಟಿಯಾನ್, ಶ್ರೀನಿವಾಸ ರಾವ್ ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು.