414.16 ಕೋ ರು. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ: ಸಂಸದ ಕ್ಯಾ. ಚೌಟ

KannadaprabhaNewsNetwork |  
Published : May 24, 2026, 02:45 AM IST
ಕ್ಯಾ.ಬ್ರಿಜೇಶ್‌ ಚೌಟ | Kannada Prabha

ಸಾರಾಂಶ

ರಾ.ಹೆ. 66ರಲ್ಲಿ ಬೈಕಂಪಾಡಿಯಿಂದ ಕೆಐಒಸಿಎಲ್‌ ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರು. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಮಂಗಳೂರು: ರಾ.ಹೆ. 66ರಲ್ಲಿ ಬೈಕಂಪಾಡಿಯಿಂದ ಕೆಐಒಸಿಎಲ್‌ ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರು. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಸುಧಾರಿಸುವ ಒಟ್ಟು 3.075 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಯೋಜನೆ ಇದಾಗಿದ್ದು, ಈ ಪೈಕಿ 1.520 ಕಿ.ಮೀ. ಉದ್ದದ ಅತ್ಯಾಧುನಿಕ 6 ಪಥದ ಎಲಿವೇಟೆಡ್ ಫ್ಲೈಓವರ್ ನಿರ್ಮಾಣಗೊಳ್ಳಲಿದೆ. ಈ ಬೃಹತ್ ಯೋಜನೆಯನ್ನು ಇಪಿಸಿ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಇದರೊಂದಿಗೆ ಹೆದ್ದಾರಿಯ ಇಕ್ಕೆಲಗಳಲ್ಲಿ ಒಟ್ಟು 5.825 ಕಿ.ಮೀ. ಉದ್ದದ ಸರ್ವಿಸ್ ರಸ್ತೆ ನಿರ್ಮಿಸಲಾಗುವುದು. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ನವ ಮಂಗಳೂರು ಬಂದರು ಪ್ರಾಧಿಕಾರ ಅಗತ್ಯವಿರುವ ಹೆಚ್ಚುವರಿ ಭೂಮಿ ಹಾಗೂ ಆರ್ಥಿಕ ಧನಸಹಾಯವನ್ನು ಹೆದ್ದಾರಿ ಪ್ರಾಧಿಕಾರಕ್ಕೆ ಒದಗಿಸಲಿದೆ. ರಾ. ಹೆ. 66ರಲ್ಲಿ ಈ ಭಾಗದ ರಸ್ತೆ ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಕಲ್ಪಿಸುವಲ್ಲಿ ಹಾಗೂ ರಫ್ತು-ಆಮದು ಸರಕುಗಳ ಸಾಗಣೆಗೆ ಅತ್ಯಂತ ನಿರ್ಣಾಯಕ ಕಾರಿಡಾರ್ ಆಗಿ ಕಾರ್ಯನಿರ್ವಹಿಸುತ್ತಿದೆ. ಈ ನೂತನ ಯೋಜನೆ ಹೆದ್ದಾರಿ ಸಂಚಾರ ಹಾಗೂ ಸ್ಥಳೀಯ ವಾಹನಗಳ ನಡುವಿನ ಓಡಾಟ ಪ್ರತ್ಯೇಕಿಸಿ, ಸುಗಮ ಸಂಚಾರ ಹಾಗೂ ರಸ್ತೆ ಸುರಕ್ಷತೆ ಅನುಕೂಲ ಕಲ್ಪಿಸಲಿದೆ ಎಂದು ಸಂಸದರು ತಿಳಿಸಿದ್ದಾರೆ.

ಬೈಕಂಪಾಡಿ ಕೈಗಾರಿಕಾ ಪ್ರದೇಶ ಮತ್ತು ಕೆಐಒಸಿಎಲ್‌ ವಲಯದ ರಸ್ತೆ ಅಭಿವೃದ್ಧಿ ಯೋಜನೆ ಜಿಲ್ಲೆಯ ಕೈಗಾರಿಕಾ ಮತ್ತು ಆರ್ಥಿಕ ಬೆಳವಣಿಗೆಗೆ ಪ್ರಮುಖ ಪ್ರೇರಕ ಶಕ್ತಿಯಾಗಲಿದೆ. ಕರಾವಳಿ ಭಾಗದ ಒಟ್ಟಾರೆ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವುದರೊಂದಿಗೆ, ಭವಿಷ್ಯದ ವಾಹನ ದಟ್ಟಣೆಯ ಅಗತ್ಯತೆಗಳನ್ನು ಪೂರೈಸಲು ಮತ್ತು ದೀರ್ಘಕಾಲೀನ ಮೂಲಸೌಕರ್ಯ ಪ್ರಯೋಜನಗಳನ್ನು ಒದಗಿಸಲು ಇದು ಸಹಕಾರಿಯಾಗಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ರಹ್ಮಾವರ ಜಿ ಎಮ್ ಶಾಲೆಯಲ್ಲಿ ರಾಜ್ಯ ತ್ರೋಬಾಲ್ ಆಯ್ಕೆ ಶಿಬಿರ
ಮೂಲ್ಕಿ: ನೂತನ ಪ್ಲಾಟ್‌ಫಾರ್ಮ್ ಲೋಕಾರ್ಪಣೆಗೆ ಸಿದ್ಧ