ಹಸಿರು ದಕ್ಷಿಣ ಕನ್ನಡ ನಿರ್ಮಾಣಕ್ಕೆ ಯುವಜನತೆ ಸಾಥ್: ಬ್ರಿಜೇಶ್ ಚೌಟ ಆಶಯ

KannadaprabhaNewsNetwork |  
Published : Jun 08, 2026, 03:45 AM IST
ಚಿತ್ರ : 7ಎಂಡಿಕೆ4 : ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.  | Kannada Prabha

ಸಾರಾಂಶ

ಜಿಲ್ಲೆಯನ್ನು ಹಸಿರು ದಕ್ಷಿಣ ಕನ್ನಡವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಯುವಜನತೆ ತಾಯಿಯ ಹೆಸರಿನಲ್ಲಿ ದೇವಸ್ಥಾನ, ದೈವಸ್ಥಾನ ಹಾಗೂ ಮನೆಯ ಪರಿಸರದಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸಬೇಕು ಎಂದು ಮಂಗಳೂರು ಸಂಸದ ಬ್ರಿಜೇಶ್ ಚೌಟ ಹೇಳಿದರು.

ಮೂಡುಬಿದಿರೆ: ಜಿಲ್ಲೆಯನ್ನು ಹಸಿರು ದಕ್ಷಿಣ ಕನ್ನಡವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಯುವಜನತೆ ತಾಯಿಯ ಹೆಸರಿನಲ್ಲಿ ದೇವಸ್ಥಾನ, ದೈವಸ್ಥಾನ ಹಾಗೂ ಮನೆಯ ಪರಿಸರದಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸಬೇಕು ಎಂದು ಮಂಗಳೂರು ಸಂಸದ ಬ್ರಿಜೇಶ್ ಚೌಟ ಹೇಳಿದರು.‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದ ಅಂಗವಾಗಿ ಅರಣ್ಯ ಇಲಾಖೆ ನೇತೃತ್ವದಲ್ಲಿ ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಆವರಣದಲ್ಲಿ ನಡೆದ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ತಾಯಿ ನಮ್ಮನ್ನು ಪ್ರೀತಿ, ಕಾಳಜಿ ಮತ್ತು ತ್ಯಾಗದ ಮೂಲಕ ಪೋಷಿಸುವಂತೆ ನಾವು ಕೂಡ ಗಿಡಗಳನ್ನು ನೆಟ್ಟು ಅವುಗಳನ್ನು ಸಂರಕ್ಷಿಸುವ ಸಂಕಲ್ಪ ಮಾಡಬೇಕು. ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಳ್ಳುವುದು ಅಗತ್ಯ ಎಂದು ಬ್ರಿಜೇಶ್ ಚೌಟ ಹೇಳಿದರು.ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ., ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುನಿಲ್ ಆಳ್ವ, ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ, ಸಹಕಾರಿ ಧುರೀಣ ದಯಾನಂದ ಪೈ, ಯುವ ಮೋರ್ಚಾ ಅಧ್ಯಕ್ಷ ಕುಮಾರ್ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಭರತ್ ಶೆಟ್ಟಿ, ಉಪಾಧ್ಯಕ್ಷ ಸಚಿನ್ ಪಣಪಿಲ, ಪುತ್ತಿಗೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್ ಇರುವೈಲು, ಗ್ರಾಪಂ ಮಾಜಿ ಅಧ್ಯಕ್ಷ ಶಶಿಧರ್ ಅಂಚನ್, ಉಪವಲಯ ಅರಣ್ಯಾಧಿಕಾರಿ ಗುರುಮೂರ್ತಿ, ಗಸ್ತು ಅರಣ್ಯ ಪಾಲಕರಾದ ಶಂಕರ ಗೌಡ ಹಾಗೂ ಸಂದೇಶ್ ಮತ್ತು ದೇವಸ್ಥಾನದ ವ್ಯವಸ್ಥಾಪಕ ಉದಯ ಕುಮಾರ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾಸ್ ಗೀಸರ್ ಸೋರಿಕೆ: ಪ್ರವಾಸಿ ಯುವತಿ ಸಾವು
ಜಿಲ್ಲೆಯ ಗೌರವ ಹೆಚ್ಚಿಸುವ ಕಾರ್ಯ ಮಾಡುವೆ: ಸಚಿವ ಖಾದರ್