ರಾಜ್ಯಮಟ್ಟದ ಕ್ರೀಡೆಯಲ್ಲಿ ಹಾಸನಕ್ಕೆ ಕೀರ್ತಿ ತನ್ನಿ: ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್. ಮಂಜುಳ

KannadaprabhaNewsNetwork |  
Published : Aug 29, 2024, 12:48 AM IST
28ಎಚ್ಎಸ್ಎನ್17 : ಬಿಇಓ ಮಂಜುಳಾ ಅವರು ಕ್ರೀಡಾಕೂಟದಲ್ಲಿ ವಿವಿಧ ತಂಡಗಳ ನಾಯಕರನ್ನು ಪರಿಚಯ ಮಾಡಿಕೊಂಡು ಶುಭ ಹಾರೈಸಿದರು. | Kannada Prabha

ಸಾರಾಂಶ

ಉತ್ತಮ ತರಬೇತಿ ಪಡೆದು ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟದಲ್ಲಿ ಪಾಲ್ಗೊಂಡು ನಂತರ ರಾಜ್ಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಹಾಸನ ಜಿಲ್ಲೆಯನ್ನು ಪ್ರಥಮ ಸ್ಥಾನಕ್ಕೆ ತರಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್.ಮಂಜುಳ ಹೇಳಿದರು. ಹಾಸನದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟ

ಕನ್ನಡಪ್ರಭ ವಾರ್ತೆ ಹಾಸನ

ಉತ್ತಮ ತರಬೇತಿ ಪಡೆದು ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟದಲ್ಲಿ ಪಾಲ್ಗೊಂಡು ನಂತರ ರಾಜ್ಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಹಾಸನ ಜಿಲ್ಲೆಯನ್ನು ಪ್ರಥಮ ಸ್ಥಾನಕ್ಕೆ ತರಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್.ಮಂಜುಳ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಬ್ರಿಲಿಯಂಟ್ ಪಬ್ಲಿಕ್ ಶಾಲೆ ಜಂಟಿಯಾಗಿ ಬುಧವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಹಾಸನ ತಾಲೂಕು ನಗರ ‘ಎ’ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಕ್ರೀಡಾಕೂಟ ಉದ್ಘಾಟನೆ ವೇಳೆ ಇದುವರೆಗೂ ಮಳೆ ಬಂದಿರಲಿಲ್ಲ. ಇದೇ ಮೊದಲು ಮಳೆ ಬಂದಿರುವುದು. ಇಷ್ಟೆಲ್ಲಾ ಸಿದ್ಧತೆ ಮಾಡಿಕೊಂಡು ಮಳೆ ಬಂದಿರುವುದು ಸಲ್ಪ ಅವ್ಯವಸ್ಥೆ ಆಗಿದೆ. ಎರಡು ದಿನ ಕ್ರೀಡಾಕೂಟ ನಡೆಯಲಿದೆ. ಈ ಶೈಕ್ಷಣಿಕ ವರ್ಷದಲ್ಲಿ ಉತ್ತಮವಾಗಿ ಸಿದ್ಧರಾಗಿ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಬಂದಿರುವುದಕ್ಕೆ ಶುಭಾಶಯಗಳನ್ನು ತಿಳಿಸುತ್ತೇನೆ. ಕ್ರೀಡೆಯಲ್ಲಿ ಸೋತವರು ಬೇಸರ ಮಾಡಿಕೊಳ್ಳದೇ ಮುಂದಿನ ವರ್ಷದಲ್ಲಿ ನಡೆಯುವ ಕ್ರೀಡೆಗೆ ತಯಾರು ಆಗಬೇಕು ಎಂದು ಕಿವಿಮಾತು ಹೇಳಿದರು.

ಕ್ರೀಡೆಯಲ್ಲಿ ಹಾಸನ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿತ್ತು. ಈ ವರ್ಷವು ಕೂಡ ಅದೇ ಸ್ಥಾನವನ್ನು ಉಳಿಸಿಕೊಳ್ಳಬೇಕು. ಈ ಕ್ರೀಡೆಯಲ್ಲಿ ಪ್ರಥಮ ಮತ್ತು ದ್ವಿತೀಯ ಬಂದವರು ತಾಲೂಕು ಮಟ್ಟದಿಂದ ರಾಜ್ಯ ಮಟ್ಟವನ್ನು ಪ್ರತಿನಿಧಿಸುವ ವೇಳೆ ಅತ್ಯುತ್ತಮವಾದ ತಬೇತಿ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ಇದಕ್ಕಾಗಿ ಯುವ ಸಬಲೀಕರಣ ಇಲಾಖೆಯವರು ಮತ್ತು ದೈಹಿಕ ಶಿಕ್ಷಣಾಧಿಕಾರಿಗಳು ನಿಮಗೆ ಸಹಕಾರ ಕೊಡಲಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡು ಹಾಸನ ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಬರುವಂತೆ ನೋಡಿಕೊಳ್ಳಿ ಎಂದು ಶುಭ ಹಾರೈಸಿದರು.

ತಾಲೂಕು ದೈಹಿಕ ಶಿಕ್ಷಾಣಾಧಿಕಾರಿ ಟಿ.ಎಂ.ವೇದಣ್ಣ, ಬ್ರಿಲಿಯಂಟ್ ಪಬ್ಲಿಕ್ ಶಾಲೆ ಶೈಕ್ಷಣಿಕ ಸಲಹೆಗಾರರಾದ ಎಸ್.ವೆಂಕಟೇಶ್, ಬ್ರಿಲಿಯಂಟ್ ಪಬ್ಲಿಕ್ ಶಾಲೆ ಮುಖ್ಯಸ್ಥ ರಘು, ಮುಖ್ಯೋಪಾಧ್ಯಯರಾದ ಆರ್.ರಾಜೇಶ್ವರಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!