- ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ವಿನಯಕುಮಾರ್
ಕನ್ನಡಪ್ರಭ ವಾರ್ತೆ ದಾವಣಗೆರೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶೋಷಿತರು, ಹಿಂದುಳಿದ ಮತ್ತು ಆರ್ಥಿಕವಾಗಿ ಹಿಂದುಳಿದವರ ಸಮಾಜದ ಮುಖ್ಯವಾಹಿನಿಗೆ ತರುವ ಮನಸುಗಳು ಕ್ಷೀಣವಾಗುತ್ತಿವೆ. ಎಸ್ಸಿ, ಎಸ್ಟಿ, ಒಬಿಸಿ ಸಮುದಾಯದವರು ಐಎಎಸ್, ಐಪಿಎಸ್‌ನಲ್ಲಿ ಗಮನಾರ್ಹ ಸಾಧನೆ ಮಾಡುತ್ತಿಲ್ಲ. ಇದಕ್ಕೆ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ ಸಿಗದಿರುವುದೇ ಕಾರಣ ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ.ಬಿ. ವಿನಯ್ ಕುಮಾರ್ ಹೇಳಿದರು.ನಗರದ ಜಯದೇವ ಸರ್ಕಲ್ ಸಮೀಪದ ಪ್ರವಾಸಿ ಮಂದಿರದ ಎದುರಿನ ಟಿ.ಎಂ. ಚಿನ್ನಮ್ಮ ಮಹೇಶ್ವರಯ್ಯ ಮೆಮೋರಿಯಲ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಮಹಿಳಾ ಸೇವಾ ಸಮಾಜ ವತಿಯಿಂದ ಏರ್ಪಡಿಸಲಾಗಿದ್ದ ಐಎಎಸ್, ಕೆಎಎಸ್ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರಸನ್ನ ರೆಡ್ಡಿ ಎಂ.ಎಚ್. ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಎ. ವಾಮದೇವಪ್ಪ, ನಿರ್ದೇಶಕರಾದ ನೀಲಮ್ಮ ಬೆಳ್ಳುಳ್ಳಿ, ಪಿ.ಗೌರಮ್ಮ ಹಾಗೂ ಕಾಲೇಜಿನ ಬೋಧಕ, ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
-7ಕೆಡಿವಿಜಿ43.ಜೆಪಿಜಿ: