ಕನ್ನಡಪ್ರಭ ವಾರ್ತೆ ಕೊರಟಗೆರೆ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲ್ಲಿ ಮಾತನಾಡಿದ ಅವರು, ೨೦ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ರಾಜಕಾರಣಿಯಾಗಿ ಕಾರ್ಯನಿರ್ವಹಿಸಿದ್ದು ಕಾಂಗ್ರೆಸ್ ಪಕ್ಷದಿಂದ ಹೊರಬಂದು ಕಳೆದ ಆ.೮ ರಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿನ ಜೆ.ಪಿ.ಭವನದಲ್ಲಿ ಅಧಿಕೃತವಾಗಿ ಜೆ ಡಿ ಎಸ್ ಪಕ್ಷ ಸೇರ್ಪಡೆಗೊಂಡಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಬೇಸರಗೊಂಡಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಹೆಚ್ಚಿನ ಸ್ಥಾನಗಳಿಸುವ ಮೂಲಕ ಮತ್ತೆ ಎಚ್.ಡಿ.ಕುಮಾರಸ್ವಾಮಿರವರು ಮುಖ್ಯಮಂತ್ರಿಯಾಗುವದು ಖಚಿತ ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಕಾಮರಾಜು ಮಾತನಾಡಿ, ಕ್ಷೇತ್ರದ ಎಲ್ಲಾ ಕಾರ್ಯಕರ್ತರು ಪಿ.ಎನ್.ಕೃಷ್ಣಮೂರ್ತಿ ರವರ ನೇತೃತ್ವದಲ್ಲಿ ಪಕ್ಷದ ಸಂಘಟನೆಗೆ ಮುಂದಾಗಿದ್ದು ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದು ನಮ್ಮ ಗುರಿ ಎಂದು ತಿಳಿಸಿದರು.ಮಾಜಿ ಅಧ್ಯಕ್ಷ ಜೆ.ಎನ್.ನರಸಿಂಹರಾಜು ಮಾತನಾಡಿ ಕೊರಟಗೆರೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸದೃಢವಾಗಿದೆ ಎನ್ನುವುದಕ್ಕೆ ತಾಲೂಕಿನ ೨೪ ಗ್ರಾ.ಪಂ.ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳೇ ಅಧ್ಯಕ್ಷರಾಗಿರುವುದು ಹಾಗೂ ಕೊರಟಗೆರೆ ಪಟ್ಟಣ ಪಂಚಾಯಿತಿಯಲ್ಲೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳೇ ಅಯ್ಕೆ ಎಂದರು.