
ಕನ್ನಡಪ್ರಭ ವಾರ್ತೆ ಕಾರವಾರ
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಬಿಜೆಪಿ ಮುಖಂಡ ನಾಗರಾಜ ನಾಯಕ ಅವರು ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ವಿರುದ್ಧ ನಡೆಸುತ್ತಿರುವ ಹೋರಾಟದ ಹಾದಿಯನ್ನು ತೀವ್ರವಾಗಿ ಖಂಡಿಸಿದರು.
ಗೃಹ ಸಚಿವರು ಒಬ್ಬ ಮುತ್ಸದ್ದಿ ರಾಜಕಾರಣಿ. ಅವರು ಜಿಲ್ಲೆಗೆ ಬಂದಾಗ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡುವುದು ಸೌಜನ್ಯದ ಕ್ರಮ. ಹಾಗೆ ಭೇಟಿ ನೀಡಿದ ವ್ಯಕ್ತಿಯಿಂದ ಏನಾದರೂ ತಪ್ಪಾಗಿದ್ದರೆ ಅದಕ್ಕೆ ಸಚಿವರನ್ನು ಹೊಣೆ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಹೋರಾಟ ನಡೆಸಲು ಎಲ್ಲರಿಗೂ ಹಕ್ಕಿದೆ, ಆದರೆ ಸಚಿವರ ಹೆಸರು ಹಾಳು ಮಾಡುವ ಪ್ರಯತ್ನ ಖಂಡನೀಯ ಎಂದು ಅವರು ಕಿಡಿಕಾರಿದರು.ಗೋಪಾಲಕೃಷ್ಣ ನಾಯಕರ ಸೂಚನೆಯಂತೆ ಪೊಲೀಸರು ನಡೆಯುತ್ತಿದ್ದಾರೆ ಎನ್ನುವುದಕ್ಕೆ ಇವರ ಬಳಿ ಏನಾದರೂ ಸಾಕ್ಷ್ಯ ಇದೆಯೇ? ಪೊಲೀಸರ ಬಗ್ಗೆ ಇಷ್ಟು ಹಗುರವಾಗಿ ಮಾತನಾಡುವುದು ಸರಿಯಲ್ಲ. ನಿಜವಾಗಿಯೂ ಅನ್ಯಾಯವಾಗಿದ್ದರೆ ಸಿಐಡಿ ಅಥವಾ ಸಿಬಿಐ ತನಿಖೆಗೆ ಆಗ್ರಹಿಸಿ ಕಾನೂನು ಸಮರ ನಡೆಸಲಿ. ಅದನ್ನು ಬಿಟ್ಟು ಗೃಹ ಸಚಿವರು ಬರುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎನ್ನುವುದು ಯಾವ ರೀತಿಯ ಹೋರಾಟ? ಎಂದು ಭಾಸ್ಕರ ಪಟಗಾರ ಪ್ರಶ್ನಿಸಿದರು.