ಕಮಲ್‌ ಹಾಸನ್ ಹೇಳಿಕೆ ಖಂಡಿಸಿ ಪೊರಕೆ ಚಳವಳಿ

KannadaprabhaNewsNetwork |  
Published : Jun 02, 2025, 01:24 AM ISTUpdated : Jun 02, 2025, 01:25 AM IST
1ಸಿಎಚ್‌ಎನ್‌56ನಟ ಕಮಲಹಾಸನ್ ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದನ್ನು ಖಂಡಿಸಿ ಕರ್ನಾಟಕ ಸೇನಾಪಡೆ  ವತಿಯಿಂದ  ಚಾಮರಾಜನಗರದಲ್ಲಿ ಪೊರಕೆ ಚಳುವಳಿ  ನಡೆಸಲಾಯಿತು. | Kannada Prabha

ಸಾರಾಂಶ

ಹೆಮ್ಮೆಯ ಕನ್ನಡ ಭಾಷೆಗೆ ಕಮಲ್‌ ಹಾಸನ್ ಅವರು ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಹೇಳಿ ಕನ್ನಡ ಭಾಷೆಗೆ ಅವಮಾನಿಸಿದ್ದಾರೆ ಎಂದು ತೀವ್ರವಾಗಿ ಖಂಡಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ನಟ ಕಮಲ್‌ ಹಾಸನ್ ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದನ್ನು ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಪೊರಕೆ ಚಳವಳಿ ನಡೆಸಲಾಯಿತು.ನಗರದ ಭುವನೇಶ್ವರಿ ವೃತ್ತದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ, ನಟ ಕಮಲ್ ಭಾವಚಿತ್ರಕ್ಕೆ ಪೊರಕೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನಾಕಾರರು ಮಾತನಾಡಿ, ಸುಮಾರು 2 ಸಾವಿರಾರು ವರ್ಷಗಳ ಭವ್ಯ ಇತಿಹಾಸವಿರುವ, ಸ್ವತಂತ್ರ ಲಿಪಿ ಹೊಂದಿರುವ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಶ್ರೀಮಂತ ಭಾಷೆ ಕನ್ನಡ. ಕೋಟ್ಯಾಂತರ ಕನ್ನಡಿಗರ ಜೀವನಾಡಿ ಆಗಿರುವ ಹೆಮ್ಮೆಯ ಕನ್ನಡ ಭಾಷೆಗೆ ಕಮಲ್‌ ಹಾಸನ್ ಅವರು ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಹೇಳಿ ಕನ್ನಡ ಭಾಷೆಗೆ ಅವಮಾನಿಸಿದ್ದಾರೆ ಎಂದು ತೀವ್ರವಾಗಿ ಖಂಡಿಸಿದರು.ನಟ ಕಮಲ್ ಹಾಸನ್ ಕ್ಷಮೆ ಕೇಳಲ್ಲ ಎಂದು ಉದ್ದಟತನ ಮೆರೆದು ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದು, ಇದು ಕನ್ನಡಿಗರ ಸ್ವಾಭಿಮಾನ ಕೆರಳಿದೆ. ಆಗಾಗಿ ರಾಜ್ಯ ಸರ್ಕಾರ, ಕರ್ನಾಟಕ ಚಲನಚಿತ್ರ ಮಂಡಳಿ ಯಾವುದೇ ಕಾರಣಕ್ಕೂ ಕಮಲ್ ಹಾಸನ್ ಚಿತ್ರ ಬಿಡುಗಡೆ ಮಾಡಬಾರದು. ರಾಜ್ಯದ ಲ್ಲಿ ತಮಿಳು ಚಿತ್ರಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.ಕೂಡಲೇ ಕಮಲ್‌ ಹಾಸನ್ ಕನ್ನಡಿಗರ ಹಾಗೂ ಕನ್ನಡ ಭಾಷೆಯ ಬಗ್ಗೆ ಕ್ಷಮೆ ಕೋರುವವರೆಗೂ ನಿರಂತರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಕರ್ನಾಟಕ ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ನಿಜಧ್ವನಿ ಗೋವಿಂದ, ಸಿ.ಎಂ.ಕೃಷ್ಣಮೂರ್ತಿ, ಮಹೇಶ್ ಗೌಡ, ಪಣ್ಯದಹುಂಡಿ ರಾಜು, ಅಜಯ್, ಡಾ.ಪರಮೇಶ್ವರಪ್ಪ, ಸುರೇಶ್ ಗೌಡ, ರೈತ ಸಂಘದ ನಾಗರಾಜು, ಅರುಣ್ ಕುಮಾರ್ ಗೌಡ, ತಾಂಡವಮೂರ್ತಿ, ವೀರಭದ್ರ, ರಾಚಪ್ಪ,ಲಿಂಗರಾಜು, ರಮೇಶ್ ಗೌಡ, ಸಿದ್ದಪ್ಪ, ಸುರೇಶ್,ನಂಜುಂಡ, ಶಿವು, ಡ್ಯಾನ್ಸ್ ಬಸವರಾಜು, ಪ್ರಕಾಶ್, ಚಂದ್ರು ಇತರರು ಭಾಗವಹಿಸಿದ್ದರು.1ಸಿಎಚ್‌ಎನ್‌56

ನಟ ಕಮಲಹಾಸನ್ ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದನ್ನು ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಚಾಮರಾಜನಗರದಲ್ಲಿ ಪೊರಕೆ ಚಳುವಳಿ ನಡೆಸಲಾಯಿತು.

------------

PREV

Recommended Stories

ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್