ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ: ಆರೋಪಿಗಳ ಪತ್ತೆಗೆ ತಂಡ ರಚನೆ

KannadaprabhaNewsNetwork |  
Published : Jul 13, 2026, 02:00 AM IST
ಫೋೋ- ಗಾಣಗಾಾಪುರ | Kannada Prabha

ಸಾರಾಂಶ

Brutal murder by crushing with a stone: Team formed to trace the accused.

ದೇವಲ ಗಾಣಗಾಪೂರ: ಅಫಜಲಪುರ ತಾಲೂಕಿನ ಚವಡಾಪುರ ಗ್ರಾಮದ ಬಳಿ ವ್ಯಕ್ತಿಯೊಬ್ಬನನ್ನು ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ಬೆಳಿಗ್ಗೆ 6.45ರ ಅವಧಿಯಲ್ಲಿ ನಡೆದಿದೆ.

ಹತ್ಯೆಗೀಡಾದ ವ್ಯಕ್ತಿಯನ್ನು ಚಿಣಮಗೇರಾ ಗ್ರಾಮದ ಬಡೆಸಾಬ ಪೈಗಂಬರ್ ಕುಡಕಿ (40) ಎಂದು ಗುರುತಿಸಲಾಗಿದೆ.

ಮೃತದೇಹ ಚವಡಾಪುರ ಗ್ರಾಮದ ಬಳಿ ಪತ್ತೆಯಾಗಿದ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆ ಕುರಿತು ದೇವಲ ಗಾಣಗಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣವರ್, ಡಿವೈಎಸ್ಪಿ ತಮ್ಮರಾಯ ಪಾಟೀಲ್ ಹಾಗೂ ಸಿಪಿಐ ಲಖನ್ ಮಸಗುಪ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ ಎಂದು ದೇವಲ ಗಾಣಗಾಪೂರ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಶ್ರಿದೇವಿ ಕಟ್ಟಿಮನಿ ತಿಳಿಸಿದ್ದಾರೆ.

ಫೋೋ- ಗಾಣಾಪುರ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಂ.ಆರ್‌.ಮಹೇಶ ಬಿಜೆಪಿ ಸಂಘಟನೆಗೆ ಕೈ ಜೋಡಿಸಿದ್ದು ಶ್ಲಾಘನೀಯ
ಸಚಿವ ಪ್ರಿಯಾಂಕ್ ಖರ್ಗೆ ಅಭಿವೃದ್ಧಿ ಬಗ್ಗೆ ಮಾತನಾಡಲಿ