ಗ್ರಾಮ ಸಹಾಯಕನ ಭೀಕರ ಹತ್ಯೆ: ಆರೋಪಿಗಳ ಬಂಧನಕ್ಕೆ ಮನವಿ

KannadaprabhaNewsNetwork |  
Published : Aug 19, 2025, 01:00 AM IST
18ಕೆಎಂಎನ್ ಡಿ12 | Kannada Prabha

ಸಾರಾಂಶ

ಅಕ್ರಮವಾಗಿ ಮರಳು ದಂಧೆ ತಡೆಯಲು ಹೋದ ಗದಗ ಜಿಲ್ಲೆಯ ಹುಲ್ಲೂರು ಗ್ರಾಮ ಸಹಾಯಕನನ್ನು ಭೀಕರವಾಗಿ ಹತ್ಯೆಗೈದಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮದ್ದೂರು ತಾಲೂಕಿನ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಕೆ.

ಕನ್ನಡಪ್ರಭ ವಾರ್ತೆ ಮದ್ದೂರು

ಅಕ್ರಮವಾಗಿ ಮರಳು ದಂಧೆ ತಡೆಯಲು ಹೋದ ಗದಗ ಜಿಲ್ಲೆಯ ಹುಲ್ಲೂರು ಗ್ರಾಮ ಸಹಾಯಕನನ್ನು ಭೀಕರವಾಗಿ ಹತ್ಯೆಗೈದಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತಾಲೂಕಿನ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹುಲ್ಲೂರು ಗ್ರಾಮದ ಸರಹದ್ದಿನಲ್ಲಿ ಅಕ್ರಮವಾಗಿ ಮರಳು ದಂಧೆ ನಿರಂತರವಾಗಿ ನಡೆಯುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗ್ರಾಮ ಸಹಾಯಕ ರಫೀಕ್ ಹುಸೇನ್ ಸಾಬ್ ನದಾಫ್ ಕಳೆದ ಆಗಸ್ಟ್ 15 ರಂದು ಮರಳು ದಂಧೆ ನಡೆಯುತ್ತಿದ್ದು, ಆ ದಂಧೆಯನ್ನು ತಡೆಗಟ್ಟಲು ಹೋದಾಗ ದುಷ್ಕರ್ಮಿಗಳು ರಫೀಕ್ ನಡುವೆ ಮಾತಿನ ಚಕಮಕಿ ನಡೆಸಿ ಬಳಿಕ ಏಕಾಏಕಿ ಅವರ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆಗೈದಿದ್ದಾರೆ ಎಂದು ಆರೋಪಿಸಿದರು.

ಈ ಕೂಡಲೇ ಅಲ್ಲಿನ ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡು ಕ್ರಮ ಜರುಗಿಸಬೇಕು. ಮೃತ ಗ್ರಾಮ ಸಹಾಯಕನ ಕುಟುಂಬಕ್ಕೆ ಸರ್ಕಾರಿ ನೌಕರಿ ನೀಡುವ ಜೊತೆಗೆ 25 ಲಕ್ಷ ರು. ಪರಿಹಾರ ಸರ್ಕಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

ನಂತರ ತಾಲೂಕು ಕಂದಾಯ ಇಲಾಖಾ ನೌಕರರ ಸಂಘ, ಗ್ರಾಮ ಆಡಳಿತಾಧಿಕಾರಿಗಳ ಸಂಘ ಹಾಗೂ ಗ್ರಾಮ ಸಹಾಯಕರ ಸಂಘ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಇಲಾಖೆ ಸಚಿವರಾದ ಕೃಷ್ಣ ಭೈರೇಗೌಡ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಗ್ರಾಮ ಆಡಳಿತಾಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಚನ್ನಬಸಪ್ಪ, ಗ್ರಾಮ ಸಹಾಯಕರ ಸಂಘದ ತಾಲೂಕು ಅಧ್ಯಕ್ಷ ಮಹಾಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಸುರೇಶ್, ಗ್ರಾಮ ಸಹಾಯಕರಾದ ಗೋಪಾಲ್, ಕೆ.ಆರ್. ಗೋವಿಂದರಾಜು, ನಿಂಗಯ್ಯ, ಆಕಾಶ್, ಮಹದೇವಮ್ಮ, ಅಪ್ಪಾಜಿ, ಸುಧಾಕರ್ ಸೇರಿದಂತೆ ಮತ್ತಿತರರು ಇದ್ದರು.

PREV

Recommended Stories

ಪಕ್ಷ ಭೇದ ಮರೆತು ಅಭಿವೃದ್ಧಿ ಕೆಲಸ ಮಾಡಿ
ಮುತ್ತೂರು ನಡುಗಡ್ಡೆಯಿಂದ 7 ಕುಟುಂಬಗಳ ಸ್ಥಳಾಂತರ