ಅಮಿತ್ ಶಾ ವಜಾಗೆ ಬಿಎಸ್ಪಿ ಆಗ್ರಹ

KannadaprabhaNewsNetwork |  
Published : Dec 21, 2024, 01:16 AM IST
ಚಿತ್ರ 20ಬಿಡಿಆರ್61 | Kannada Prabha

ಸಾರಾಂಶ

BSP demands Amit Shah's dismissal

ಬೀದರ್: ಸಂಸತ್ ಅಧಿವೇಶನದಲ್ಲಿ ಭಾರತೀಯ ಸಂವಿಧಾನಕ್ಕೆ 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುವಾಗ ಕೇಂದ್ರ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಹೆಸರನ್ನು ಪದೇ ಪದೇ ಉಚ್ಚರಿಸುವ ಬದಲು ದೇವರನ್ನು ಸ್ಮರಿಸಿದರೆ ಏಳೇಳು ಜನ್ಮಗಳ ಸ್ವರ್ಗ ದೊರೆಯುತ್ತಿತ್ತು ಎಂದು ಮಾತನಾಡಿದ್ದು ಡಾ.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದಂತಾಗಿದೆ ಎಂದು ಬಿಎಸ್ಪಿ ಆರೋಪಿಸಿದೆ

ಇಂತಹ ಮನುವಾದಿ ಮತ್ತು ಜಾತಿವಾದಿ ವ್ಯಕ್ತಿಗಳು ಸಂವಿಧಾನದ ಆಧಾರದ ಮೇಲೆ ರಚನೆಯಾಗಿರುವ ಸರ್ಕಾರದಲ್ಲಿ ಸಚಿವರಾಗಿ ಮುಂದುವರೆಯಲು ಯಾವುದೇ ನೈತಿಕತೆ ಇಲ್ಲ. ಆದ್ದರಿಂದ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ಮತ್ತು ಸಂವಿಧಾನ ವಿರೋಧಿ ಮನಸ್ಥಿತಿ ಇರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತಕ್ಷಣ ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಬಹುಜನ ಸಮಾಜ ಪಕ್ಷ ಆಗ್ರಹಿಸಿದೆ. ಈ ವೇಳೆ ಜಿಲ್ಲಾಧ್ಯಕ್ಷ ಕಪೀಲ ಗೋಡ ಬೊಲೆ, ರಾಜ್ಯ ಕಾರ್ಯದರ್ಶಿ ಜ್ಞಾನೇಶ್ವರ ಸಿಂಗಾರೆ, ಶಕ್ತಿಕಾಂತ ಬಾವಿದೊಡ್ಡಿ, ರಾಹುಲ ಖಂದಾರೆ, ದತ್ತಾತ್ರಿ ಗಾಯಕವಾಡ, ಮಹೇಶ ಭೋಲಾ, ಪ್ರದೀಪ ಫುಲೆ, ಸತೀಶ ದೊಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

--ಚಿತ್ರ 20ಬಿಡಿಆರ್61ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಲು ಆಗ್ರಹಿಸಿ ಬಿಎಸ್ಪಿ ಮನವಿ ಸಲ್ಲಿಸಿತು.--

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ : ಸಂಪುಟ
ಶಕ್ತಿ ಯೋಜನೆ ಫಲಾನುಭವಿ ಸ್ತ್ರೀಯರಿಗೆ ಸ್ಮಾರ್ಟ್‌ಕಾರ್ಡ್‌