ಬಿಎಸ್‌ಪಿಎಲ್ ಕಾರ್ಖಾನೆ: ಜನರು, ಸ್ವಾಮೀಜಿ ಅಭಿಪ್ರಾಯಕ್ಕೆ ಸರ್ಕಾರ ಬದ್ಧ

KannadaprabhaNewsNetwork |  
Published : Sep 07, 2025, 01:00 AM IST
6446654 | Kannada Prabha

ಸಾರಾಂಶ

ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆಗೆ ಈಗಾಗಲೇ ತಾತ್ಕಾಲಿಕ ತಡೆ ನೀಡಲಾಗಿದೆ. ಈ ಕುರಿತು ಜನರು ಹಾಗೂ ಗವಿಸಿದ್ಧೇಶ್ವರ ಶ್ರೀಗಳ ಅಭಿಪ್ರಾಯಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೊಪ್ಪಳ:

ನಗರಕ್ಕೆ ಹೊಂದಿಕೊಂಡು ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆಗೆ ಈಗಾಗಲೇ ತಾತ್ಕಾಲಿಕ ತಡೆ ನೀಡಲಾಗಿದೆ. ಈ ಕುರಿತು ಜನರು ಹಾಗೂ ಗವಿಸಿದ್ಧೇಶ್ವರ ಶ್ರೀಗಳ ಅಭಿಪ್ರಾಯಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಜಿಲ್ಲೆಯ ಗಿಣಿಗೇರಾ ಹತ್ತಿರದ ಎಂಎಸ್‌ಪಿಎಲ್ ಏರ್‌ಸ್ಟ್ರಿಪ್‌ಗೆ ಭೇಟಿ ನೀಡಿ, ಪೊಲೀಸ್ ಗೌರವ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾರ್ಖಾನೆ ಕುರಿತು ರಾಜ್ಯ ಸರ್ಕಾರ ಸ್ಪಷ್ಟವಾಗಿದೆ. ಆದರೆ, ಕೇಂದ್ರ ಸರ್ಕಾರದ ಪರಿಸರ ಇಲಾಖೆ ಅನುಮತಿ ನೀಡಿದೆ. ಅವರನ್ನು ಕೇಳಿ ಎಂದ ಸಿಎಂ, ಕೇಂದ್ರ ಸರ್ಕಾರದವರ ಬಳಿ ಈ ಕುರಿತು ಪ್ರಶ್ನಿಸಿ ಎಂದರು.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಈ ಕುರಿತು ಪ್ರಶ್ನಿಸಿದ್ದೇವೆ ಎಂದಾಗ, ಅವರು ಯಾಕೆ ಉತ್ತರ ನೀಡುತ್ತಿಲ್ಲ ಎಂದು ಪ್ರಶ್ನಿಸಿ ಎಂದ ಸಿಎಂ, ಸರ್ಕಾರ ಜನರು ಮತ್ತು ಸ್ವಾಮೀಜಿಗಳ ಅಭಿಪ್ರಾಯಕ್ಕೆ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು.ಕೇಂದ್ರ ಪರಿಸರ ಇಲಾಖೆ ಪರವಾನಗಿ ನೀಡಿದೆ: ಎಂ.ಬಿ. ಪಾಟೀಲ್ ಕೊಪ್ಪಳ ಬಳಿ ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪಿಸುವ ಕುರಿತು ಈಗಾಗಲೇ ಕೇಂದ್ರ ಪರಿಸರ ಇಲಾಖೆ ಪರವಾನಗಿ ನೀಡಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದರು.ಸಿಎಂ ಜನರ ಮತ್ತು ಸ್ವಾಮೀಜಿ ಅಭಿಪ್ರಾಯಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದಾಗ ಮಧ್ಯಪ್ರವೇಶಿಸಿದ ಸಚಿವರು, ರಾಜ್ಯ ಸರ್ಕಾರ ಯಾವುದೇ ಪರವಾನಗಿ ನೀಡಿಲ್ಲ. ಕೇಂದ್ರ ಸರ್ಕಾರವೇ ಪರವಾನಗಿ ನೀಡಿದೆ ಎಂದು ಸದನದಲ್ಲೂ ಸಹ ಹೇಳಿದ್ದೇನೆ ಎಂದರು.

ನಾನು ಕೊಪ್ಪಳಕ್ಕೆ ಬರುತ್ತೇನೆ ಎಂದು ಹೇಳಿದ್ದು ನಿಜ. ಆದರೆ, ನಾನು ಸ್ವಾಮೀಜಿಗಳೊಂದಿಗೆ ಮಾತುಕತೆ ನಡೆಸಲು ಬರುತ್ತೇನೆ ಎಂದು ಹೇಳಿದ್ದೇನೆ. ಈಗಲೂ ಕಾರ್ಖಾನೆ ಸ್ಥಾಪನೆ ಕುರಿತು ತೀರ್ಮಾನ ತೆಗೆದುಕೊಳ್ಳುವ ಮುನ್ನ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಅಧ್ಯಯನ ಮಾಡಲು ಹೇಳಿದ್ದು, ವರದಿ ಬಂದ ನಂತರ ಕ್ರಮವಹಿಸಲಾಗುವುದು ಎಂದರು.

PREV

Recommended Stories

ಭಕ್ತರ ಸಹಕಾರದಿಂದ ದೇವಸ್ಥಾನದಲ್ಲಿ ಹೊಸತನ
ಪತ್ನಿ ಮೇಲೆ ಹಲ್ಲೆಗೈದು ಅರ್ಧ ತಲೆ ಬೋಳಿಸಿದ ಪತಿ