)
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜನಸೇವೆ ಬದುಕಿಗೆ 50 ವರ್ಷಗಳು ತುಂಬಿರುವ ಸವಿನೆನಪಿಗೆ ಮೇ 9 ರಂದು ಚಿತ್ರದುರ್ಗದಲ್ಲಿ ಬೃಹತ್ ಬಿಎಸ್‌ವೈ ಅಭಿಮಾನೋತ್ಸವ ಆಯೋಜಿಸಲಾಗಿದೆ.
ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿರುವ ಜನಪರ, ಸಮಾಜಮುಖಿ ಹೋರಾಟಗಾರ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರನ್ನು ಪಕ್ಷ ಹಾಗೂ ನಾಡಿನ ಜನತೆ ಪರವಾಗಿ ಅಭಿನಂದಿಸಲು ನಿರ್ಧರಿಸಲಾಗಿದೆ ಎಂದರು.ಮೇ 9ರ ಮಧ್ಯಾಹ್ನ 12 ಕ್ಕೆ ಕಾರ್ಯಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಲಿದ್ದು, ಮಾಜಿ ಉಪ ಮುಖ್ಯ ಮಂತ್ರಿ ಗೋವಿಂದ ಕಾರಜೋಳ ಅಧ್ಯಕ್ಷತೆ ವಹಿಸಲಿದ್ದಾರೆ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಎಚ್.ಡಿ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಸಂಸದರಾದ ಜಗದೀಶ್ ಶೆಟ್ಟರ್, ಬಸವರಾಜ್ ಬೋಮ್ಮಾಯಿ, ವಿಪಕ್ಷ ನಾಯಕ ಆರ್, ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಚಿಕ್ಕಮಗಳೂರು ಜಿಲ್ಲೆಯಿಂದ 25 ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಅಭಿಮಾನೋತ್ಸವದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು ಸುಮಾರು 10 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು, ಬಿಎಸ್‌ವೈ ಅಭಿಮಾನಿಗಳು, ಹಿತೈಷಿಗಳು ಪಾಲ್ಗೋಳ್ಳಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಗರಮಂಡಲ ಅಧ್ಯಕ್ಷ ಕೆ.ಎಸ್ ಪುಷ್ವರಾಜ್, ವಕ್ತಾರ ಹೆಚ್.ಎಸ್ ಪುಟ್ಟಸ್ವಾಮಿ, ಮಾಧ್ಯಮ ಪ್ರಮುಖ್ ದಿನೇಶ್ ಕೋಟೆ, ಮುಖಂಡರಾದ ಚಂದ್ರು, ಚಮಿನ್ ಉಪಸ್ಥಿತರಿದ್ದರು.