ಸಾಂಸ್ಕೃತಿಕ ಹಬ್ಬ ರೀತಿ ಬಿಎಸ್‌ವೈ ಅಭಿಮಾನೋತ್ಸವ: ಕಾರಜೋಳ

KannadaprabhaNewsNetwork |  
Published : May 07, 2026, 01:15 AM IST
ವಿಜಯೇಂದ್ರರಿಂದ ಸಿದ್ಧತೆ ಪರಿಶೀಲನೆ | Kannada Prabha

ಸಾರಾಂಶ

ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ಸಮಾಜಸೇವೆ, ಜೀವನ ಚರಿತ್ರೆಯನ್ನು ಚಿತ್ರದುರ್ಗದಲ್ಲಿ ಒಂದು ಸಾಂಸ್ಕೃತಿಕ ಹಬ್ಬದ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದೇವೆ ಎಂದು ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ ಹೇಳಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ಸಮಾಜಸೇವೆ, ಜೀವನ ಚರಿತ್ರೆಯನ್ನು ಚಿತ್ರದುರ್ಗದಲ್ಲಿ ಒಂದು ಸಾಂಸ್ಕೃತಿಕ ಹಬ್ಬದ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದೇವೆ ಎಂದು ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಅವರ ಜೀವನಚರಿತ್ರೆ ಮತ್ತು ಸದನದಲ್ಲಿ ಯಡಿಯೂರಪ್ಪನವರು ಎಂಬ ಸಂಬಂಧ ‘ಕೆಂದಾವರೆ- ಕಮಲದಲ್ಲಿ ಅರಳಿದ ಹೂ’ ‘ಸದನದಲ್ಲಿ ಶಿಕಾರಿ’ ಗ್ರಂಥಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ನಿಮಿತ್ತ ಚಿತ್ರದುರ್ಗಕ್ಕೆ ಆಗಮಿಸುವ ಯಡಿಯೂರಪ್ಪ ಅವರನ್ನು ಬರಮಾಡಿಕೊಳ್ಳಲು ವಿಶೇಷ ಸಂದರ್ಭಗಳನ್ನು ಸಜ್ಜುಗೊಳಿಸಲಾಗಿದೆ. ಮೇ 8ರ ಸಂಜೆ ಯಡಿಯೂರಪ್ಪನವರ ಪುರಪ್ರವೇಶ ನಡೆಯಲಿದ್ದು, ಸಾಂಸ್ಕೃತಿಕ ಸ್ಪರ್ಶ ನೀಡಲಾಗುವುದು. ಪುರಪ್ರವೇಶವನ್ನು ಹಬ್ಬದ ರೀತಿಯಲ್ಲಿ ಮಾಡಲು ತಯಾರಿ ನಡೆಸಿದ್ದೇವೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 24 ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಇದಲ್ಲದೇ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಹಲವು ಯೋಜನೆಗಳ ಪುನರ್ ಪರಿಚಯಿಸುವ ಸಂಬಂಧದ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಇರಲಿವೆ ಎಂದು ಕಾರಜೋಳ ಹೇಳಿದರು.*ಓಪನ್‌ ಐಟಂ*ಶಾ ಬರುವ ಸಮಯ ಬದಲಾಗಿದ್ದರಿಂದ

ಮಧ್ಯಾಹ್ನ ಕಾರ್ಯಕ್ರಮ: ವಿಜಯೇಂದ್ರ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮದಿಂದಾಗಿ ಚಿತ್ರದುರ್ಗದ ಹೊರವಲಯದಲ್ಲಿ ಮೇ 9ರಂದು ನಿಗದಿ ಆಗಿರುವ ಬಿ.ಎಸ್‌.ಯಡಿಯೂರಪ್ಪ ಅಭಿಮಾನೋತ್ಸವದ ಸಮಯ ಬದಲಾಗಿದೆ. ಬೆಳಗ್ಗೆ ನಡೆಯಬೇಕಿದ್ದ ಕಾರ್ಯಕ್ರಮವನ್ನು ಮಧ್ಯಾಹ್ನ 2 ಗಂಟೆಯ ನಂತರ ಆರಂಭಿಸಲಾಗುತ್ತದೆ. ಅಮಿತ್‌ ಶಾ ಅವರು ಮಧ್ಯಾಹ್ನ 4ಕ್ಕೆ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಭಿಮಾನೋತ್ಸವಕ್ಕೆ ವ್ಯಾಪಕ ಸಿದ್ಧತೆ ನಡೆದಿದೆ. 10 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಆಗಮಿಸಲಿದ್ದಾರೆ. ಇದಕ್ಕಾಗಿ 10 ಸಾವಿರ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಕಾರು ಸೇರಿ ವಿವಿಧ 50 ಸಾವಿರ ವಾಹನಗಳಲ್ಲಿ ಜನತೆ ಆಗಮಿಸಲಿದ್ದಾರೆ. ಸಾವಿರಕ್ಕೂ ಹೆಚ್ಚು ಮಠಾಧೀಶರು ಕಾರ್ಯಕ್ರಮ ಸಾಕ್ಷೀಕರಿಸಲಿದ್ದಾರೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳ ಸೃಜನಶೀಲತೆ, ಪರಿಶ್ರಮದಲ್ಲಿ ದೇಶದ ಭವಿಷ್ಯ
ಮನುಷ್ಯನಿಗೆ ಹೃದಯ ಎಷ್ಟು ಮುಖ್ಯವೋ ಕಣ್ಣು ಅಷ್ಟೇ ಮುಖ್ಯ