ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗೌತಮ ಬುದ್ಧ ಇಡೀ ವಿಶ್ವಕ್ಕೆ ಶಾಂತಿ, ಸಹನೆ, ಸಹಬಾಳ್ವೆ, ಸಹೋದರತೆಯನ್ನು ಬಿತ್ತಿದರು. ಭಾರತದಲ್ಲಿ ಹುಟ್ಟಿ ಬೆಳೆದ ಗೌತಮ ಬುದ್ಧರು ಇಡೀ ವಿಶ್ವಕ್ಕೆ ಶಾಂತಿಯ ಸಂದೇಶ ಪಸರಿಸಿದ್ದಾರೆ ಎಂದು ವಿನಾಯಕ ನರ್ವಡೆ ಅವರು ತಿಳಿಸಿದರು.ದೇಶ ಶಾಂತಿ ಸಹಬಾಳ್ವೆ, ಸಹೋದರತ್ವಕ್ಕೆ ಹೆಸರಾಗಿದೆ:
ಸಂತಕವಿ ಕನಕದಾಸ ಮತ್ತು ತತ್ವಪದಕಾರ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಡಾ.ಮುಸ್ತಾಪ ಕೆ.ಎಚ್. ಮಾತನಾಡಿ, ಬೌದ್ಧ ಧರ್ಮದ ಸಂಸ್ಥಾಪಕ ಗೌತಮ ಬುದ್ಧ, ಮಹಾನ್ ದಾರ್ಶನಿಕ, ಸಿದ್ದಾರ್ಥ ಎನ್ನುವ ರಾಜವಂಶದ ಕುಡಿಯಾಗಿದ್ದು, ಸಕಲ ವೈಬೋಗಗಳನ್ನು ತ್ಯಜಿಸಿ, ಜ್ಞಾನೋದಯ ಪಡೆದು ಗೌತಮ ಬುದ್ಧನಾಗುತ್ತಾನೆ ಎಂದರು.
ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ ಕೃಷ್ಣಪ್ಪ ಮಾತನಾಡಿ ಬುದ್ಧ ಎಂದರೆ ಜ್ಞಾನ, ಹುಟ್ಟಿದ್ದು ರಾಜ ಮನೆತನದಲ್ಲಿ, ಆದರೂ ಸಹ ಬೆಳೆಯುತ್ತಾ ಇತರರಂತೆ ಬದುಕು ನಡೆಸುತ್ತಾರೆ. ಶಾಂತಿಯ ಸಂದೇಶ ಸಾರುತ್ತಾರೆ ಎಂದರು.
ಆದ್ಯ ಕರ್ತವ್ಯವಾಗಿದೆ:
ಕನ್ನಡ ಸಾಹಿತ್ಯ ಪರಿಷತ್ತು ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಸಾಗರ್ ಮಾತನಾಡಿ ಗೌತಮ ಬುದ್ಧರು ಶಾಂತಿಮಂತ್ರವನ್ನು ಇಡೀ ಜಗತ್ತಿಗೆ ಸಾರಿದ್ದಾರೆ. ಎಲ್ಲರೂ ಸಮಾನವಾಗಿ ಸಹೋದರತೆಯಿಂದ ಬದುಕು ನಡೆಸಬೇಕು ಎಂಬುದು ಗೌತಮ ಬುದ್ಧರ ಆಶಯವಾಗಿತ್ತು ಎಂದರು.
ಬುದ್ದರು ಮಾನವೀಯ ಮೌಲ್ಯಗಳನ್ನು ಇಡೀ ವಿಶ್ವಕ್ಕೆ ಸಾರಿದ್ದಾರೆ. ಬೌದ್ಧ ಸಂಸ್ಕೃತಿ ಮತ್ತು ಸಂಪ್ರದಾಯ ಇಂದಿಗೂ ಸಹ ಪ್ರಚಲಿತದಲ್ಲಿದೆ. ಬುದ್ಧ ಹುಟ್ಟಿದ ಭಾರತದಲ್ಲಿ ಇಡೀ ವಿಶ್ವಕ್ಕೆ ಬುದ್ಧನ ಸಂದೇಶಗಳು ಸ್ಮರಣೀಯವಾಗಿದೆ ಎಂದರು.
ನಿವೃತ್ತ ಶಿಕ್ಷಕರಾದ ಬಿ.ಸಿ.ಶಂಕರಯ್ಯ ಹಾಗೂ ದಸಂಸ ಭೀಮವಾದ ಸಂಘಟನಾ ಸಂಚಾಲಕರಾದ ಕೆ.ಬಿ.ರಾಜು ಅವರು ಬುದ್ಧನ ಕುರಿತು ಹಾಡು ಹಾಡಿ ಗಮನ ಸೆಳೆದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು. ಶಿಕ್ಷಕಿ ಉಷಾರಾಣಿ ನಿರೂಪಿಸಿದರು. ಮಣಜೂರು ಮಂಜುನಾಥ್ ವಂದಿಸಿದರು.