ಭಗವಾನ್ ಬುದ್ಧ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷಕನ್ನಡಪ್ರಭವಾರ್ತೆ ಬಳ್ಳಾರಿ
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ. ಜೋಳದರಾಶಿ ದೊಡ್ಡನಗೌಡ ರಂಗಮದಿರದಲ್ಲಿ ಏರ್ಪಡಿಸಿದ್ದ ಭಗವಾನ್ ಬುದ್ಧ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಜ್ಞಾನದಿಂದ ಜ್ಞಾನದ ಕಡೆ, ಸಮಾಜದಲ್ಲಿದ್ದ ತಾರತಮ್ಯ ನೀತಿಯ ವಿರುದ್ಧ ಹೋರಾಡಿ ಹೊಸ ವ್ಯವಸ್ಥೆಯ ಸೈದ್ಧಾಂತಿಕ ನೆಲೆಗಟ್ಟನ್ನು ಮಹಾನ್ ವ್ಯಕ್ತಿ ಭಗವಾನ್ ಬುದ್ಧ ಅವರು ಭದ್ರಗೊಳಿಸಿದರು. ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರು ಸಹ ಬೌಧ್ದ ಧರ್ಮ ಸ್ವೀಕರಿಸುವ ಮೂಲಕ ಬೌಧ್ದ ಧರ್ಮವನ್ನು ಬೆಂಬಲಿಸಿದರು ಎಂದು ತಿಳಿಸಿದರು.ಬೌದ್ಧ ಧರ್ಮದ ಸಂಸ್ಥಾಪಕ ಗೌತಮ ಬುದ್ಧ ಮಹಾನ್ ದಾರ್ಶನಿಕರಾಗಿದ್ದರು. ಸಿದ್ಧಾರ್ಥ ಎನ್ನುವ ರಾಜವಂಶದ ಕುಡಿ ಸಕಲ ವೈಭೋಗವನ್ನು ತ್ಯಜಿಸಿ, ಜ್ಞಾನೋದಯ ಪಡೆದು ಗೌತಮ ಬುದ್ಧನಾಗುತ್ತಾನೆ. ಲೋಕಕ್ಕೆ ಶಾಂತಿ, ಅಹಿಂಸೆಯ ಮಹತ್ವವನ್ನು ಬೋಧಿಸುತ್ತಾನೆ. ಬುದ್ಧನ ಜನನ, ಮರಣ ಹಾಗೂ ಜ್ಞಾನೋದಯವನ್ನು ಸ್ಮರಿಸುವ ಉದ್ದೇಶದಿಂದ ಪ್ರತಿ ವರ್ಷ ಬುದ್ಧ ಪೂರ್ಣಿಮೆಯನ್ನು ಆಚರಿಸಲಾಗುತ್ತದೆ ಎಂದರು.
ಸಹಾಯಕ ಆಯುಕ್ತ ಪಿ.ಪ್ರಮೋದ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಲೋಕಕ್ಕೆ ಶಾಂತಿ, ಅಹಿಂಸೆಯ ಮಹತ್ವ ಭೋದಿಸಿದ ಬುದ್ಧರ ತತ್ವ ಬೋಧನೆ ಅರಿತರೆ ಜೀವನದಲ್ಲಿ ಸುಖ–ಶಾಂತಿ ನೆಮ್ಮದಿ ನೆಲೆಯೂರಲಿದೆ. ಬುದ್ಧನ ಜ್ಞಾನ ಮಾರ್ಗ ಅರಿತರೆ ಅದು ಮನುಷ್ಯರ ಮನಸ್ಸಿನ ಶುದ್ಧಿ ಮತ್ತು ಇದರಿಂದ ದುಃಖ ನಿವಾರಣೆ ಹೊಂದಲು ಸಾಧ್ಯವಾಗಲಿದೆ ಎಂದು ಪ್ರಮೋದ್ ತಿಳಿಸಿದರು.
ಇದಕ್ಕೂ ಮುನ್ನ ಭಗವಾನ್ ಬುದ್ಧ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗಣ್ಯರು ಕಾರ್ಯಕ್ರಮ ಉದ್ಘಾಟಿಸಿದರು.
ಸಂಭ್ರಮದ ಮೆರವಣಿಗೆ:
ಮೆರವಣಿಗೆಯು ನಗರದ ಡಾ. ರಾಜ್ ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಗಿ ಚೆನ್ನಪ್ಪ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ, ರೈಲ್ವೆ ಸ್ಟೇಷನ್ ರಸ್ತೆ, ಎಚ್.ಆರ್. ಗವಿಯಪ್ಪ ವೃತದ ಮೂಲಕ ಡಾ. ಜೋಳದರಾಶಿ ದೊಡ್ಡನಗೌಡ ರಂಗಮದಿರದ ವೇದಿಕೆ ಸಭಾಂಗಣಕ್ಕೆ ತಲುಪಿ ಸಂಪನ್ನಗೊಂಡಿತು.