ದಾವಣಗೆರೆ: ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ಅಕ್ಷರಶಃ “ಜನಸ್ನೇಹಿ” ಬಜೆಟ್ ಆಗಿದೆ. ಭಾರತದ ಆರ್ಥಿಕತೆಯನ್ನು ಸಶಕ್ತಗೊಳಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ 3 ಮುಖ್ಯ ಕರ್ತವ್ಯಗಳ ಮೇಲೆ ಗಮನ ಹರಿಸುತ್ತಿದೆ. ಉತ್ಪಾದಕತೆಯನ್ನು ಹೆಚ್ಚಿಸುವುದು, ಜನರ ಆಶೋತ್ತರಗಳನ್ನು ಈಡೇರಿಸುವುದು ಮತ್ತು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದೊಂದಿಗೆ ಪ್ರತಿಯೊಂದು ಕುಟುಂಬಕ್ಕೂ ಸಂಪನ್ಮೂಲಗಳನ್ನು ತಲುಪಿಸುವ ಗುರಿಯನ್ನು ಹೊಂದಿದೆ ಎಂದು ಮಾಜಿ ಸಂಸದ ಡಾ. ಜಿ.ಎಂ.ಸಿದ್ದೇಶ್ವರ ಅಭಿಪ್ರಾಯ ತಿಳಿಸಿದ್ದಾರೆ.
ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಉಪಕ್ರಮವನ್ನು ಘೋಷಿಸಿದ್ದು, ಈ ಯೋಜನೆಯು ಖಾದಿ, ಕೈಮಗ್ಗ ಮತ್ತು ಕರಕುಶಲ ಉದ್ಯಮಗಳಿಗೆ ಜಾಗತಿಕ ಮಾರುಕಟ್ಟೆ ಒದಗಿಸುವ ಮೂಲಕ ನೇಕಾರರು ಮತ್ತು ಗ್ರಾಮೀಣ ಕುಶಲಕರ್ಮಿಗಳಿಗೆ ಹೊಸ ಶಕ್ತಿ ನೀಡಲಿದೆ. ಹೀಗೆ ಇನ್ನೂ ಅನೇಕ ಕ್ಷೇತ್ರಗಳಿಗೆ ಕೊಡುಗೆಯನ್ನು ನೀಡಿರುವಂತಹದ್ದು ಅತ್ಯಂತ ಸ್ವಾಗತಾರ್ಹ ಮತ್ತು ಜನಸ್ನೇಹಿ ಬಜೆಟ್ ಇದಾಗಿರುವುದು ಎಂದು ಸಿದ್ದೇಶ್ವರ ತಿಳಿಸಿದ್ದಾರೆ.
- - --1ಕೆಡಿವಿಜಿ46 : ಡಾ.ಜಿ.ಎಂ.ಸಿದ್ದೇಶ್ವರ