ಅಂಗನವಾಡಿ ಯೋಜನೆಗೆ ಬಜೆಟ್ ಕಡಿತ: ಪ್ರತಿಭಟನೆ

KannadaprabhaNewsNetwork |  
Published : Feb 06, 2024, 01:35 AM ISTUpdated : Feb 06, 2024, 01:24 PM IST
5ಜಿಬಿ4 | Kannada Prabha

ಸಾರಾಂಶ

ಬಜೆಟ್ ಕಡಿತಗೊಳಿಸುವ ಮೂಲಕ ಸರ್ಕಾರ 2 ಕೋಟಿ ತಾಯಂದಿರ, 8 ಕೋಟಿ ಮಕ್ಕಳ ಆರೋಗ್ಯ, ಆಹಾರ, ಶಿಕ್ಷಣದ ಹಕ್ಕನ್ನು ಕಾಪಾಡಲು ಸಾಧ್ಯವೇ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ಅಂಗನವಾಡಿ ಯೋಜನೆಗೆ ಬಜೆಟ್ ಕಡಿತ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿ (ಸಿಐಟಿಯು) ನೇತೃತ್ವದಲ್ಲಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿಂದು ಬಜೆಟ್ ಪ್ರತಿಸುಟ್ಟು ಪ್ರತಿಭಟನೆ ನಡೆಸಲಾಯಿತು.

ಸಂಘದ ಜಿಲ್ಲಾಧ್ಯಕ್ಷೆ ಗೌರಮ್ಮ ಪಾಟೀಲ, ಶಾಂತಾ ಘಂಟಿ, ದೇವಮ್ಮ ಚಿತ್ತಾಪೂರ, ರಾಜಮಾ ಪಟೇಲ್, ಎಂ.ಬಿ.ಸಜ್ಜನ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಅಮೃತ ಕಾಲದಲ್ಲಿ “ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಈಗ ಸಬ್ ಕಾ ವಿಶ್ವಾಸ್” ಅನ್ನುವುದು ಬರಿ ಘೋಷಣೆಗಳಲ್ಲಿ ಮಾತ್ರವಿದೆ. ರಾಮರಾಜ್ಯ ಅನ್ನುವ ಸರ್ಕಾರ ಹಸಿವಿನ ಸೂಚ್ಯಾಂಕ 111ನೇ ಸ್ಥಾನದಿಂದ ಭಾರತವನ್ನು ಮೇಲೆತ್ತಲು ಯಾವ ಪ್ರಯತ್ನವನ್ನು ಬಜೆಟ್‍ನಲ್ಲಿ ಮಾಡಿಲ್ಲ. ಐಸಿಡಿಎಸ್‍ಗೆ 300 ಕೋಟಿಗಿಂತ ಹೆಚ್ಚು ಬಜೆಟ್ ಕಡಿತ ಮಾಡಲಾಗಿದೆ. 

ಇರುವ ಬಜೆಟ್ ಕಡಿತಗೊಳಿಸುವ ಮೂಲಕ ಸರ್ಕಾರ 2 ಕೋಟಿ ತಾಯಂದಿರ, 8 ಕೋಟಿ ಮಕ್ಕಳ ಆರೋಗ್ಯ, ಆಹಾರ, ಶಿಕ್ಷಣದ ಹಕ್ಕನ್ನು ಕಾಪಾಡಲು ಸಾಧ್ಯವೇ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. ಅಂಗನವಾಡಿ ನೌಕರರ ಗೌರವಧನ ಹೆಚ್ಚಿಸದ ಕೇಂದ್ರ ಸರ್ಕಾರದ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

PREV

Recommended Stories

ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!