ತಂಬಾಕು ಸೇವನೆಯಿಂದ ದೂರ ಉಳಿದು, ಉತ್ತಮ ಸಮಾಜ ನಿರ್ಮಿಸಿ: ಡಾ.ಶ್ರೀನಿವಾಸ್ ಬಿ.ಎಲ್.

KannadaprabhaNewsNetwork |  
Published : Jun 06, 2025, 01:24 AM ISTUpdated : Jun 06, 2025, 01:25 AM IST
ಚಿತ್ರ :  2ಎಂಡಿಕೆ2 : ವಿಶ್ವ ತಂಬಾಕು ರಹಿತ ದಿನಾಚರಣೆ ಉದ್ಘಾಟನೆ.  | Kannada Prabha

ಸಾರಾಂಶ

ವಿಶ್ವ ತಂಬಾಕು ರಹಿತ ದಿನಾಚರಣೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಡಗು ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ "ವಿಶ್ವ ತಂಬಾಕು ರಹಿತ ದಿನಾಚರಣೆ”ಯು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೆ.ಎಂ.ಸತೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಯುವ ಜನತೆ ತಂಬಾಕು ಎನ್ನುವ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದು, ಅವರನ್ನು ಈ ವ್ಯಸನದಿಂದ ಮುಕ್ತರಾಗಲು ಸಮಾಜ ತೆಗೆದುಕೊಳ್ಳಬೇಕಾದ ಜವಾಬ್ದಾರಿಗಳ ಬಗ್ಗೆ ಸಲಹೆ ನೀಡಿದರು.ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್ ಬಿ.ಎಲ್. ಅವರು ವಿಶ್ವ ತಂಬಾಕು ರಹಿತ ದಿನಾಚರಣೆಯ ವಿಶೇಷತೆಯ ಮತ್ತು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಉದ್ದೇಶ ಮತ್ತು ಕಾರ್ಯವೈಖರಿಗಳ ಹಾಗೂ ಕೋಟ್ಪಾ ಕಾಯಿದೆ 2003ರ ಬಗ್ಗೆ ತಿಳಿಸಿ, ಇತ್ತೀಚಿನ ದಿನಗಳಲ್ಲಿ ಯುವಕರು ತಂಬಾಕುವಿನ ಸೇವನೆಗೆ ಮಾರುಹೋಗುತ್ತಿದ್ದು ಇದರಿಂದ ಅನೇಕ ಅಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ತಂಬಾಕು ಸೇವನೆಯಿಂದ ಯುವ ಜನತೆ ದೂರ ಉಳಿದು, ಉತ್ತಮ ಸಮಾಜ ನಿರ್ಮಿಸಿ ಎಂದು ಪ್ರಾಸ್ತವಿಕ ನುಡಿಗಳನ್ನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರು ತಂಬಾಕು ಸೇವನೆಯಿಂದ ಉಂಟಾಗುವ ದೈಹಿಕ ಮತ್ತು ಮಾನಸಿಕ ತೊಂದರೆಗಳ ಬಗ್ಗೆ ತಿಳಿಸಿ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆ 2003 ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿರುವ ಬಗ್ಗೆ ತಿಳಿಸಿದರು. ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮದ ದಂತ ವೈದ್ಯಧಿಕಾರಿ ಡಾ.ಅಮೂಲ್ಯ ಅವರು ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು, ಡೀನ್ ಹಾಗೂ ನಿರ್ದೇಶಕರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು, ದಂತ ವೈದ್ಯಾಧಿಕಾರಿಗಳು, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಿಬ್ಬಂದಿ, ಎಎನ್‌ಎಂಟಿಸಿ ನರ್ಸಿಂಗ್ ವಿದ್ಯಾರ್ಥಿಗಳು, ಪ್ರಯೋಗಶಾಲಾ ತಂತ್ರಾಜ್ಞರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತರಾದ ಮಂಜುನಾಥ್ ಅವರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

PREV

Recommended Stories

ಸಚಿವ ಜಾರ್ಜ್‌ ಆಪ್ತ ಎಲೆಕ್ಟ್ರಿಕ್‌ ಗುತ್ತಿಗೆದಾರರಿಗೆ ಐಟಿ ಶಾಕ್‌
ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ