ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಯ ಗಡಿಭಾಗದಲ್ಲಿ ಹಲವಾರು ಸಮಸ್ಯೆಗಳಿವೆ. ಯುವಕರಿಗೆ ಉದ್ಯೋಗ ಒದಗಿಸಬೇಕು, ಜಿಲ್ಲೆಯ ದಂತ ಎಲ್ಲಾ ತಾಲೂಕುಗಳಲ್ಲಿ ಕನ್ನಡಿಗರಿಗಾಗಿ ಕನ್ನಡ ಭಾಷೆ ಉಳಿಸಲು ಬೆಳೆಸಲು ಕನ್ನಡಿಗರ ಕಾರ್ಯಕ್ರಮಗಳನ್ನು ಮಾಡಲು ತಾಲೂಕಿಗೊಂದು ಕನ್ನಡ ಭವನ ನಿರ್ಮಾಣ ಮಾಡಬೇಕು ಎಂದು ನವ ಕರ್ನಾಟಕ ಸ್ವಾಭಿಮಾನ ವೇದಿಕೆ ಸಂಸ್ಥಾಪಕ ಅಧ್ಯಕ್ಷ ರಾಮಾಂಜನಪ್ಪ ಎಂ.ಎಚ್. ಅಭಿಪ್ರಾಯಪಟ್ಟರು.ನಗರದ ರಂಗಮಂದಿರದಲ್ಲಿ ನವ ಕರ್ನಾಟಕ ಸ್ವಾಭಿಮಾನ ವೇದಿಕೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯಿಂದ ಕರ್ನಾಟಕ ರಾಜ್ಯಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಸಾಮಾಜಿಕ ಸೇವೆ ಸಲ್ಲಿಸಿದ ೪೫ ಗಣ್ಯರಿಗೆ ಪುನೀತ್ ರಾಜ ರತ್ನ ರಾಜ್ಯ ಪ್ರಶಸ್ತಿ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಕನ್ನಡ ಶಾಲೆಗಳನ್ನು ಉಳಿಸಿ
ಗಡಿಭಾಗದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ಪ್ರಯತ್ನ ಮಾಡಬೇಕು. ರೈತರಿಗೆ ಕಾರ್ಮಿಕರಿಗೆ ಬಡವರಿಗೆ ನೋಂದವರಿಗೆ ಮಹಿಳೆಯರಿಗೆ ಯುವಕರಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಅಧಿಕಾರಿಗಳ ಮುಖಾಂತರ ಮನೆಗೆ ತಲುಪಿಸುವಂತಹ ಕಾರ್ಯಕ್ರಮಗಳು ಶಾಸಕರು ಮಾಡಬೇಕು, ಸಾರ್ವಜನಿಕ ಮೂಲಭೂತ ಸೌಲಭ್ಯಗಳಾದ ಸರ್ಕಾರಿ ರಸ್ತೆಗಳು, ದೀಪದ ವ್ಯವಸ್ಥೆಗಳು ಸರಿಯಾದ ಸಮಯಕ್ಕೆ ಗ್ರಾಮಗಳಲ್ಲಿ ಮಾಡುವಂತಾಗಬೇಕು. ಜಿಲ್ಲೆಯಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ ಎಂದು ತಿಳಿಸಿದರು.ರೋಟರಿ ಅಧ್ಯಕ್ಷ ನಾಗನಂದ್ ಕೆಂಪರಾಜ್, ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್, ಸಂಘಟನೆಯ ಕಾರ್ಯಾಧ್ಯಕ್ಷ ನರಸಿಂಹಯ್ಯ ಸಿ.ಎಸ್, ಅಶ್ವಿನಿ.ಪಿ, ಕಾರ್ಮಿಕ ಘಟಕ ಮಹಿಳಾ ಅಧ್ಯಕ್ಷೆ ಮಂಜುಳ, ಮಹೇಂದ್ರ ಕಂಪನಿ ಹೀರೋ ಸ್ಪೇಸ್ ನಾಗರಾಜ್, ಶ್ರೀರಾಮ್, ರಾಜ್ಯ ವಕ್ತಾರ ಬಿ.ಟಿ ಪ್ರಸಾದ್, ಜಿಲ್ಲಾ ಅಧ್ಯಕ್ಷ ರವಿಕುಮಾರ್, ಜಿಲ್ಲಾ ಮಹಿಳಾ ಅಧ್ಯಕ್ಷೆ ಶಬರೀನ್ ತಾಜ್, ತಾಲೂಕು ಅಧ್ಯಕ್ಷ ಶ್ರೀನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಧಿಕ್ ಅಹಮದ್, ಕೋಲಾರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಸಿಎಂ, ಶ್ರೀನಿವಾಸಪುರ ತಾಲೂಕು ಯುವ ಅಧ್ಯಕ್ಷ ಸಾಬೀರ್, ಮುಳಬಾಗಿಲು ತಾಲೂಕು ಅಧ್ಯಕ್ಷ ಅಶೋಕ, ಬಂಗಾರಪೇಟೆ ತಾಲೂಕು ಪ್ರವೀಣ್, ಮುಳಬಾಗಿಲು ಗೌರವಾಧ್ಯಕ್ಷ ಶಫಿ ಉಲ್ಲಾ ಇದ್ದರು.