-ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕಸಾಪ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್‌ಗೆ ಮನವಿ
ಕನ್ನಡಪ್ರಭ ವಾರ್ತೆ ಭದ್ರಾವತಿ
ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಸಾಹಿತ್ಯ ಭವನದ ಸಭಾಮಂಟಪ ರಂಗಮಂದಿರದ ಮಾದರಿಯಲ್ಲಿ ನಿರ್ಮಾಣಗೊಳಿಸುವಂತೆ ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು.ನ್ಯೂಟೌನ್ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ನೂತನ ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಂಬಂಧ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮನವಿ ಸಲ್ಲಿಸಲಾಯಿತು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕಸಾಪ ಭವನ ನಿರ್ಮಾಣ ಸಮಿತಿ ಅಧ್ಯಕ್ಷೆ, ಎಮರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ, ಸಮಿತಿ ಪ್ರಮುಖರಾದ ಡಿ. ಪ್ರಭಾಕರ ಬೀರಯ್ಯ, ಜಾನಪದ ಪರಿಷತ್ ಹಿರಿಯೂರು ಹೋಬಳಿ ಘಟಕದ ಅಧ್ಯಕ್ಷ ಜಯರಾಂ ಗೊಂದಿ, ಅಂಬೇಡ್ಕರ್ ಜಾನಪದ ಕಲಾ ಸಂಘದ ತಮಟೆ ಜಗದೀಶ್, ದಿವಾಕರ್, ರವಿಕುಮಾರ್ ಉಪಸ್ಥಿತರಿದ್ದರು. ----
ಭದ್ರಾವತಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಸಾಹಿತ್ಯ ಭವನದ ಸಭಾಮಂಟಪ ರಂಗಮಂದಿರದ ಮಾದರಿಯಲ್ಲಿ ನಿರ್ಮಾಣಗೊಳಿಸುವಂತೆ ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಅವರಿಗೆ ಮನವಿ ಸಲ್ಲಿಸಲಾಯಿತು.