ಕನ್ನಡಪ್ರಭ ವಾರ್ತೆ ಕೋಲಾರ
ಜಿಲ್ಲೆಯ ಸಾರ್ವಜನಿಕರ ದಶಕಗಳ ದೀರ್ಘಕಾಲದ ಕನಸಾಗಿರುವ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ಯೋಜನೆಯನ್ನು ಕಾಲಮಿತಿಯಲ್ಲಿ ಮುಗಿಸಲು ಯುದ್ಧೋಪಾದಿ ಸಿದ್ಧತೆಗಳನ್ನು ಕೈಗೊಳ್ಳಲು ಸೂಚಿಸಿದರು.
ಕೋಲಾರ ತಾೂಲೂಕಿನ ಗಾಜಲದಿನ್ನೆ ಸರ್ವೇ ನಂ.೧೨ ರಲ್ಲಿ ಲಭ್ಯವಿರುವ ೨೨ ಎಕರೆ ೩೬ ಗುಂಟೆ (೯.೦೪೮೧ ಹೆಕ್ಟೇರ್) ಜಮೀನಿನಲ್ಲಿ ಭವ್ಯ ವೈದ್ಯಕೀಯ ಕಾಲೇಜು, ೬೦೦ ಹಾಸಿಗೆಗಳ ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಆರೋಗ್ಯ ಭವನ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಜಾಗದಲ್ಲಿ ೧೯೫೫ ರಿಂದ ಕೆ.ಎನ್.ಟಿ.ಬಿ ಸ್ಯಾನಿಟೋರಿಯಂ ಕ್ಷಯ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿತ್ತು.ಪ್ರಸ್ತಾವಿತ ಭೂಮಿ ಪ್ರಸ್ತುತ ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವುದರಿಂದ, ಅದಕ್ಕೆ ಪರ್ಯಾಯವಾಗಿ ಸುಗಟೂರು ಹೋಬಳಿಯ ಮದನಹಳ್ಳಿ ಸರ್ವೇ ನಂ.೧೨೫ರಲ್ಲಿ ಅಷ್ಟೇ ಪ್ರಮಾಣದ ಕಂದಾಯ ಜಮೀನನ್ನು ಅರಣ್ಯ ಇಲಾಖೆಗೆ ಒದಗಿಸಲಾಗಿದೆ. ಕೇಂದ್ರ ಸರ್ಕಾರದ ಪರಿವೇಶ್ ಪೋರ್ಟಲ್ ಮೂಲಕ ಈಗಾಗಲೇ ಅರ್ಜಿ ಸಲ್ಲಿಸಲಾಗಿದ್ದು, ೨ನೇ ಹಂತದ ಅನುಮೋದನೆಗೆ ಇರುವ ಸಣ್ಣಪುಟ್ಟ ತಾಂತ್ರಿಕ ದೋಷಗಳನ್ನು ಶೀಘ್ರವೇ ಸರಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ ಸಿಕ್ಕಲಿಗರ್, ಡಾ.ವೆಂಕಟರಾಘವನ್, ಡಿಹೆಚ್‌ಓ ಡಾ.ಶ್ರೀನಿವಾಸ್ ಇದ್ದರು.