ಪೋಲಿಯೋ ಮುಕ್ತ ಸಮಾಜ ನಿರ್ಮಿಸಿ: ಸತೀಶ್ ಸೈಲ್

KannadaprabhaNewsNetwork |  
Published : Jun 29, 2026, 02:15 AM IST
ಶಾಸಕ ಸತೀಶ್ ಸೈಲ್ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದರು. | Kannada Prabha

ಸಾರಾಂಶ

ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ.

ಪಲ್ಸ್ ಪೋಲಿಯೋ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ

ಕನ್ನಡಪ್ರಭ ವಾರ್ತೆ ಕಾರವಾರ

ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದ್ದು, ಪೋಷಕರು ತಮ್ಮ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಪೋಲಿಯೋ ಹನಿ ನೀಡುವಂತೆ ಎಂ.ಸಿ.ಎ. ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು.

ಭಾನುವಾರ, ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕ್ರಿಮ್ಸ್‌ನಲ್ಲಿ ನಡೆದ ಪಲ್ಸ್ ಪೋಲಿಯೋ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿ ಮಾತನಾಡಿದರು.

ಮಕ್ಕಳಿಗೆ ಈ ​ಹಿಂದೆ ಪೋಲಿಯೋ ಲಸಿಕೆ ಹಾಕಿಸಿದ್ದರೂ ಸಹ, ಸುರಕ್ಷತೆಯ ದೃಷ್ಟಿಯಿಂದ ಈ ರಾಷ್ಟ್ರೀಯ ಅಭಿಯಾನದ ದಿನದಂದು ಮತ್ತೊಮ್ಮೆ ಲಸಿಕೆ ಕೊಡಿಸುವುದು ಅತ್ಯಗತ್ಯವಾಗಿದ್ದು, ​ಜಿಲ್ಲೆಯ ಯಾವುದೇ ಮಗು ಪೋಲಿಯೋ ಹನಿಗಳಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 0 ಯಿಂದ 5 ವರ್ಷದೊಳಗಿನ ಒಟ್ಟು 89,388 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, 873 ​ಪೋಲಿಯೋ ಬೂತ್‌ಗಳು, 31 ​ಟ್ರಾನ್ಸಿಸ್ಟ್ ತಂಡಗಳು,9 ​ಮೊಬೈಲ್ ತಂಡಗಳನ್ನು ರಚಿಸಿದ್ದು ​ಒಟ್ಟು 3596 ಸಿಬ್ಬಂದಿ ಹಾಗೂ 184 ​ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಕ್ರಿಮ್ಸ್ ನ ಡೀನ್ ಡಾ. ಪೂರ್ಣಿಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಂಕರ್ ರಾವ್, ಜಿಲ್ಲಾ ಸರ್ಜನ್ ಡಾ. ಗಣೇಶ್, ಆರ್.ಸಿ.ಹೆಚ್. ಅಧಿಕಾರಿ ಡಾ. ನಟರಾಜ್, ಕ್ರಿಮ್ಸ್ ನ ವೈದ್ಯಕಿಯ ಅಧಿಕ್ಷಕ ಡಾ. ಪಾವಸ್ಕರ್, ಡಾ. ಹೇಮಗಿರಿ, ಡಾ. ವಿಜಯರಾಜ್, ಕ್ಯಾ.ಡಾ. ರಮೇಶ್ ರಾವ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ ಜಿಲ್ಲಾಸ್ಪತ್ರೆಗೆ ಇರುವುದು ಒಂದೇ ಆ್ಯಂಬುಲೆನ್ಸ್
ಹೊರಗುತ್ತಿಗೆ ನೌಕರರ ನೂತನ ಕನಿಷ್ಠ ವೇತನ ಆದೇಶ ತಕ್ಷಣ ಜಾರಿಗೊಳಿಸಲು ಆಗ್ರಹ