ತಾಂತ್ರಿಕ ಶಿಕ್ಷಣ ಪಡೆದವರಿಗೆಲ್ಲಾ ಸರ್ಕಾರಿ ಉದ್ಯೋಗ ದೊರೆಯುವುದಿಲ್ಲ. ಶಿಕ್ಷಿತರು ಸ್ವಯಂ ಉದ್ಯೋಗದತ್ತ ಆಲೋಚಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಗುಡಿ ಕೈಗಾರಿಕೆಗಳನ್ನು ಸ್ಥಾಪಿಸಿ, ಸ್ವಯಂ ಉದ್ಯೋಗಿಗಳಾಗಿ ನೂರಾರು ಜನರಿಗೆ ಉದ್ಯೋಗ ನೀಡುವ ಶಕ್ತಿಯನ್ನು ಬೆಳೆಸಿಕೊಳ್ಳಬೇಕು.
ಕೆ.ಆರ್.ಪೇಟೆ: ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಕೌಶಲ್ಯದ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕ ಎಚ್.ಟಿ.ಮಂಜು ಕರೆ ನೀಡಿದರು.
ಪಟ್ಟಣದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಸಮಾರೋಪ ಸಂಭ್ರಮ ಉದ್ಘಾಟಿಸಿದ ನಂತರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ, ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಕಲಿಕಾ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕು. ಸತತ ಪರಿಶ್ರಮದಿಂದ ಅಭ್ಯಾಸ ಮಾಡಿ ಜಾಗತಿಕ ಸವಾಲುಗಳನ್ನು ತಮ್ಮ ತಾಂತ್ರಿಕ ಕೌಶಲ್ಯದ ಮೂಲಕ ಎದುರಿಸಿ ಸಾಧನೆ ಮಾಡಿ ಸುಭದ್ರ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ತಾಂತ್ರಿಕ ಶಿಕ್ಷಣ ಪಡೆದವರಿಗೆಲ್ಲಾ ಸರ್ಕಾರಿ ಉದ್ಯೋಗ ದೊರೆಯುವುದಿಲ್ಲ. ಶಿಕ್ಷಿತರು ಸ್ವಯಂ ಉದ್ಯೋಗದತ್ತ ಆಲೋಚಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಗುಡಿ ಕೈಗಾರಿಕೆಗಳನ್ನು ಸ್ಥಾಪಿಸಿ, ಸ್ವಯಂ ಉದ್ಯೋಗಿಗಳಾಗಿ ನೂರಾರು ಜನರಿಗೆ ಉದ್ಯೋಗ ನೀಡುವ ಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಆರ್.ದಿನೇಶ್ ಅಧ್ಯಕ್ಷತೆ ವಹಿಸಿದ್ದರು. ವಿವಿಧ ವಿಭಾಗಗಳ ಮುಖ್ಯಸ್ಥರಾದ ಮಂಜುನಾಥ ಉಪಾಧ್ಯ, ಡಾ.ನಾಗಪ್ಪ ಭಜಂತ್ರಿ, ಡಾ.ಅರುಣ್ ಕುಮಾರ್, ಡಾ.ರುದ್ರೇಶ್, ನಂದೀಶ್, ಡಾ.ಶಶಿಕಲಾ, ಡಾ.ಪ್ರಶಾಂತ್, ಡಿಂಕಾ ಮಹೇಶ್, ಮತ್ತಿತರರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.