ಜ್ಞಾನವಂತರಾಗಿ ಸದೃಢ ಸಮಾಜ ನಿರ್ಮಿಸಿ: ತಹಸೀಲ್ದಾರ್ ಪರುಸಪ್ಪ ಕುರುಬರ

KannadaprabhaNewsNetwork |  
Published : Aug 16, 2025, 12:00 AM IST
ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು. ತಹಸೀಲ್ದಾರ್ ಪರುಸಪ್ಪ ಕುರುಬರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. | Kannada Prabha

ಸಾರಾಂಶ

ಸ್ವಾತಂತ್ರ್ಯೋತ್ಸವ ಸಾರ್ಥಕಗೊಳ್ಳಬೇಕಾದರೆ ನಾವೆಲ್ಲರೂ ಕೇವಲ ವಿದ್ಯಾವಂತರಾದರೆ ಸಾಲದು, ಜ್ಞಾನವಂತರಾಗಿ ಸದೃಢ ಸಮಾಜ ನಿರ್ಮಾಣ ಮಾಡವಂತವರಾಗಬೇಕು. ಪರಿಸರ ಕಾಳಜಿಯೊಂದಿಗೆ ಉತ್ತಮ ಆರೋಗ್ಯವಂತ ಸಮಾಜ ಸಹ ನಿರ್ಮಾಣಗೊಳ್ಳಬೇಕು ಎಂದು ತಹಸೀಲ್ದಾರ್ ಪರುಸಪ್ಪ ಕುರುಬರ ಹೇಳಿದರು.

ಭದ್ರಾವತಿ: ಸ್ವಾತಂತ್ರ್ಯೋತ್ಸವ ಸಾರ್ಥಕಗೊಳ್ಳಬೇಕಾದರೆ ನಾವೆಲ್ಲರೂ ಕೇವಲ ವಿದ್ಯಾವಂತರಾದರೆ ಸಾಲದು, ಜ್ಞಾನವಂತರಾಗಿ ಸದೃಢ ಸಮಾಜ ನಿರ್ಮಾಣ ಮಾಡವಂತವರಾಗಬೇಕು. ಪರಿಸರ ಕಾಳಜಿಯೊಂದಿಗೆ ಉತ್ತಮ ಆರೋಗ್ಯವಂತ ಸಮಾಜ ಸಹ ನಿರ್ಮಾಣಗೊಳ್ಳಬೇಕು ಎಂದು ತಹಸೀಲ್ದಾರ್ ಪರುಸಪ್ಪ ಕುರುಬರ ಹೇಳಿದರು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಹಮ್ಮಿಕೊಂಡ ೭೯ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಕೆ.ಎನ್. ಹೇಮಂತ್, ಸದಸ್ಯರಾದ ಬಿ.ಟಿ ನಾಗರಾಜ್, ಚನ್ನಪ್ಪ, ಲತಾ ಚಂದ್ರಶೇಖರ್, ಶೃತಿ ವಸಂತಕುಮಾರ್, ಅನುಸುಧಾ ಮೋಹನ್ ಪಳನಿ, ಬಸವರಾಜ ಬಿ. ಆನೇಕೊಪ್ಪ, ಜಾರ್ಜ್, ಶಶಿಕಲಾ ನಾರಾಯಣಪ್ಪ, ಕಾಂತರಾಜ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಜಿ.ಎಸ್ ಗೋಪಾಲ್, ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ, ಆರ್‌ಎಎಫ್ ಬೆಟಾಲಿಯನ್ ಕಮಾಂಡರ್ ಕಮಲೇಶ್, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.ಗಂಗಣ್ಣ, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರಾದ ಶಿವುಪಾಟೀಲ್, ವಿನೋದ್, ಶಿವಪ್ಪ, ರಾಜೇಂದ್ರ, ಸುಕನ್ಯ, ಮಹಮದ್ ರಫಿ ಹಾಜರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ಸುಮತಿ ಕಾರಂತ್, ಕೋಕಿಲ, ತ್ರಿವೇಣಿ ತಂಡದವರಿಂದ ನಾಡಗೀತೆ ಪ್ರಸ್ತುತ ಪಡಿಸಲಾಯಿತು. ಪೊಲೀಸ್, ಗೃಹ ರಕ್ಷಕದಳ, ವಿವಿಧ ಶಾಲಾ ಕಾಲೇಜುಗಳ ಎನ್‌ಸಿಸಿ, ಸ್ಕೌಟ್ಸ್-ಗೈಡ್ಸ್, ಬ್ಯಾಂಡ್‌ಸೆಟ್ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದವು. ಪ್ರತಿಭಾವಂತ ವಿದ್ಯಾರ್ಥಿಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗೌರವಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ