ರಾಮನಗರ: ಜಗತ್ತಿನಲ್ಲಿ ಬದಲಾವಣೆ ತರುವುದಕ್ಕಿಂತಲೂ ಮೊದಲು ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಶಿಕ್ಷಣಾರ್ಜನೆಯ ಸಮಯದಲ್ಲಿಯೇ ವ್ಯಕ್ತಿತ್ವ ರೂಪಿಸಿಕೊಳ್ಳದಿದ್ದರೆ ಜಗತ್ತಿನಲ್ಲಿ ಬದಲಾವಣೆ ತರುವುದು ಕಷ್ಟವಾಗುತ್ತದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿ-ಐಜಿಪಿ) ಡಾ.ಎಂ.ಎ.ಸಲೀಂ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನೀವೆಲ್ಲರು (ವಿದ್ಯಾರ್ಥಿಗಳು) ಭವಿಷ್ಯದಲ್ಲಿ ಸಮಾಜಕ್ಕೆ ಬದಲಾವಣೆ ತರುವ ವ್ಯಕ್ತಿಗಳಾಗುತ್ತೀರಿ ಎಂಬ ನಂಬಿಕೆ ನನಗಿದೆ. ಈ ಕಾಲೇಜು ನಿಮ್ಮೆಲ್ಲರಿಗೂ ಉತ್ತಮ ಜ್ಞಾನ, ಶಕ್ತಿ ಮತ್ತು ವ್ಯಕ್ತಿತ್ವ ನಿರ್ಮಾಣಕ್ಕೆ ಅಗತ್ಯವಾದ ಮೌಲ್ಯಗಳನ್ನು ನೀಡುತ್ತಿದೆ. ಇಲ್ಲಿಂದ ಹೊರಬಂದ ನಂತರ ನೀವು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರುವವರಾಗುತ್ತೀರಿ ಎಂದು ತಿಳಿಸಿದರು.
ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಮಾಜಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಬಹುದು. ಐಎಎಸ್, ಐಪಿಎಸ್ ನಂತಹ ಉನ್ನತ ಹುದ್ದೆಗಳನ್ನು ಅಲಂಕರಿಸಿದವರಲ್ಲಿ ಎಂಜಿನಿಯರಿಂಗ್ ಪದವೀಧರರೆ ಹೆಚ್ಚು ಮಂದಿ ಇದ್ದಾರೆ. ನಿಮ್ಮಲ್ಲು ಕಠಿಣ ಪರಿಶ್ರಮ ಇದ್ದರೆ ಉನ್ನತ ಹುದ್ದೆ ಅಲಂಕರಿಸುವುದರಲ್ಲಿ ಅನುಮಾನ ಇಲ್ಲ ಎಂದು ಹೇಳಿದರು.ಈ ಭೂಮಿಯನ್ನು ಬದುಕಲು ಉತ್ತಮ ಸ್ಥಳವನ್ನಾಗಿಸಲು ಶಿಲಾಯುಗದಿಂದಲೂ ಮಾನವನ ಪ್ರಯತ್ನ ಸಾಗಿದೆ. ವಿಶ್ವದ ಅನೇಕ ಮಹಾನ್ ವ್ಯಕ್ತಿಗಳು ಅಪಾರ ಪರಿಶ್ರಮ ಮತ್ತು ನಿಷ್ಠೆಯಿಂದ ಅವಿಷ್ಕಾರಗಳನ್ನು ಮಾಡಿ ಈ ಭೂಮಿಯನ್ನು ಉತ್ತಮ ಸ್ಥಳವನ್ನಾಗಿಸಲು ಶ್ರಮಿಸಿದ್ದಾರೆ. ಎಲ್ಲರೂ ತಮ್ಮ ಮಟ್ಟಗೆ ಈ ಪ್ರಯತ್ನದಲ್ಲಿರಬೇಕು ಎಂದರು.
ಗೌಸಿಯಾ ತಾಂತ್ರಿಕ ಮತ್ತು ಕೈಗಾರಿಕಾ ಟ್ರಸ್ಟ್ ಗೌರವ ಕಾರ್ಯದರ್ಶಿ ಉಮರ್ ಇಸ್ಮಾಯಿಲ್ ಖಾನ್ ಮಾತನಾಡಿ, ಗೌಸಿಯಾ ಎಂಜಿನಿಯರಿಂಗ್ ಕಾಲೇಜಿನಿಂದ ಇಲ್ಲಿಯವರೆಗೆ ಸುಮಾರು 20 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಂಜಿನಿಯರ್ ಗಳಾಗಿ ಹೊರಹೊಮ್ಮಿದ್ದಾರೆ. ಇದರಲ್ಲಿ ಅಲ್ಪಸಂಖ್ಯಾತ ಸಮುದಾಯದ ರಾಮನಗರದ 200 ಕ್ಕೂ ಹೆಚ್ಚು ಯುವತಿಯರು ಸೇರಿದ್ದಾರೆ. ಬಹುಶಃ ರಾಮನಗರದಲ್ಲಿ ಎಂಜಿನಿಯರಿಂಗ್ ಕಾಲೇಜು ಇಲ್ಲದಿದ್ದರೆ ಇಷ್ಟು ಮಂದಿ ಅಲ್ಪಸಂಖ್ಯಾತ ಯುವತಿಯರು ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದರು.
ಈ ಸಂದರ್ಭದಲ್ಲಿ ಎಂಜಿನಿಯರಿಂಗ್ ಪದವಿಯ ವಿವಿಧ ವಿಭಾಗಗಳಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳು ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕೋಟ್ ...............
- ಡಾ.ಎಂ.ಎ.ಸಲೀಂ, ಡಿಜಿ - ಐಜಿಪಿ
ಭಾರತ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. ಎಲ್ಲ ಜಾತಿ ವರ್ಗದವರು ಪರಸ್ಪರ ಸಹಕಾರದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಆದರೆ, ಮಾಧ್ಯಮಗಳಲ್ಲಿ ತೋರಿಸುತ್ತಿರುವ ಕೋಮು ಗಲಭೆ ಸುದ್ದಿಗಳಿಂದ ಪ್ರಭಾವಿತರಾಗಬೇಡಿ. ಏಕೆಂದರೆ ಭಾರತದಲ್ಲಿ ಪ್ರತಿನಿತ್ಯ ಸಾವಿರಾರು ಹಿಂದು ಸಮುದಾಯದ ವೈದ್ಯರು ಮುಸಲ್ಮಾನರಿಗೆ ಚಿಕಿತ್ಸೆ ಕೊಡುತ್ತಿದ್ದಾರೆ. ಕ್ರಿಶ್ಚಿಯನ್ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲಿ ಮುಸಲ್ಮಾನರು, ಹಿಂದೂಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದೇ ನಿಜವಾದ ಭಾರತ. ವಿದ್ಯಾರ್ಥಿಗಳು ಸಕರಾತ್ಮಕವಾಗಿಯೇ ಯೋಚನೆ ಮಾಡಬೇಕು.
13ಕೆಆರ್ ಎಂಎನ್ 8.ಜೆಪಿಜಿ
ರಾಮನಗರದ ಗೌಸಿಯಾ ಎಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ಕಾಲೇಜು ವಾರ್ಷಿಕೋತ್ಸವ - ಗೌಸಿಯಾನ - 2026 ಸಮಾರಂಭದಲ್ಲಿ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ ಬಹುಮಾನ ವಿತರಿಸಿದರು.