ಮಹಾತ್ಮರ ಸಂದೇಶದಿಂದ ಸುಂದರವಾದ ಸಮಾಜ ನಿರ್ಮಾಣ

KannadaprabhaNewsNetwork | Published : Feb 16, 2024 1:46 AM

ಸಾರಾಂಶ

ಮಹಾತ್ಮರು ಸಾರಿದ ಸಂದೇಶಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು ಜೀವನ ಮಾಡಿದರೇ ಸುಂದರವಾದ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ತಹಸೀಲ್ದಾರ್‌ ವೈ.ಎಸ್.ಸೋಮನಕಟ್ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಮಹಾತ್ಮರು ಸಾರಿದ ಸಂದೇಶಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು ಜೀವನ ಮಾಡಿದರೇ ಸುಂದರವಾದ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ತಹಸೀಲ್ದಾರ್‌ ವೈ.ಎಸ್.ಸೋಮನಕಟ್ಟಿ ಹೇಳಿದರು.

ಪಟ್ಟಣದ ತಹಸೀಲ್ದಾರ್‌ ಕಚೇರಿಯ ಸಭಾಂಗಣದಲ್ಲಿ ಗುರುವಾರ ತಾಲೂಕಾಡಳಿತದಿಂದ ಸಂತ ಸೇವಾಲಾಲ ಜಯಂತಿ ಆಚರಣೆಯಲ್ಲಿ ಸಂತ ಸೇವಾಲಾಲ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸರ್ಕಾರದ ಮಹಾತ್ಮರ ಜಯಂತಿಗಳನ್ನು ಆಚರಣೆ ಮಾಡುವ ಮೂಲಕ ಸಮಾಜಕ್ಕೆ ಅವರ ಸಂದೇಶಗಳನ್ನು ಮುಟ್ಟಿಸುವ ಕಾರ್ಯ ಮಾಡುತ್ತಿದೆ ಎಂದರು.

ಪುರಸಭೆ ಸದಸ್ಯ ನೀಲಪ್ಪ ನಾಯಕ ಮಾತನಾಡಿ, ಸಮಾಜದ ಉದ್ದಾರಕ್ಕೆ ಉದಯಿಸಿದ ದೈವಿಪುರುಷ ಸಂತ ಸೇವಾಲಾಲ ಅವರು ಸತ್ಯ, ಅಹಿಂಸೆಯನ್ನು ಬೋಧಿಸಿದ್ದಾರೆ. ಅವರು ಸಮಾಜದಲ್ಲಿನ ಮೌಢ್ಯತೆ ತೊಡೆದು ಹಾಕಲು ಪ್ರಯತ್ನಿಸಿದರು. ಅವರು ಇಡೀ ಮನುಕುಲವನ್ನು ಪ್ರೀತಿಸುವಂತೆ ಬೋಧಿಸಿದ್ದಾರೆ. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು ಮುನ್ನಡೆಯಬೇಕು ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ಬಂಜಾರಾ ಸಮಾಜ ಧರ್ಮಗುರು ಸಂತ ಸೇವಾಲಾಲರ ಬೋಧನೆಗಳು ಸಾರ್ವಕಾಲಿಕವಾಗಿವೆ. ನಮ್ಮ ಸಮಾಜದ ತಾಂಡಾಗಳು ಹಿಂದುಳಿದಿವೆ. ಅವುಗಳು ಅಭಿವೃದ್ಧಿಯಾಗುವ ಜೊತೆಗೆ ಅಲ್ಲಿ ಸರ್ಕಾರ ಎಲ್ಲ ಮೂಲಭೂತ ಸೌಲಭ್ಯಗಳನ್ನು ನೀಡುವಂತಾಗಬೇಕು ಎಂದರು.

ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಸಂತ ಸೇವಾಲಾಲರ ಜೀವನ ಕುರಿತು ಸವಿಸ್ತಾರವಾಗಿ ವಿವರಿಸಿದರು. ಡಿಎಸ್‌ಎಸ್ ಮುಖಂಡ ಅಶೋಕ ಚಲವಾದಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರಾದ ರವಿ ನಾಯ್ಕೋಡಿ, ದೇವೇಂದ್ರ ಚವ್ಹಾಣ, ಬಂಜಾರಾ ಸೇವಾ ಸಮಿತಿ ಅಧ್ಯಕ್ಷ ಕಾಶೀನಾಥ ರಾಠೋಡ, ಡಾ.ಬಸವರಾಜ ಚವ್ಹಾಣ, ತಹಸೀಲ್ದಾರ್‌ ಕಚೇರಿ ಸಿಬ್ಬಂದಿಯಾದ ಮಂಜು ಹಳ್ಳೂರ, ಆರ್.ವಿ.ಘಾಟಗೆ, ನಿರ್ಮಲಾ ಪೂಜಾರಿ, ಎಎಸೈ ಸಾರವಾಡ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು. ವಿರೇಶ ಗೂಡಲಮನಿ ನಿರೂಪಿಸಿ, ವಂದಿಸಿದರು.

Share this article