ಕನ್ನಡಪ್ರಭ ವಾರ್ತೆ ವಿರಾಜಪೇಟೆ
ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಇಲ್ಲಿನ ಜನ ಸೇವಾ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇಂದಿನ ಸಮಾಜದಲ್ಲಿ ಪ್ರತಿಯೊಬ್ಬರೂ ಶಿಕ್ಷಣ ಪಡೆಯುವುದು ಅನಿವಾರ್ಯವಾಗಿದೆ. ಹಿಂದೆ ಶಿಕ್ಷಣಕ್ಕೆ ಮಹತ್ವವಿದ್ದರೂ ಪ್ರೋತ್ಸಾಹದ ಕೊರತೆ ಕಾಣಿಸಿಕೊಂಡಿತ್ತು. ಸರ್ಕಾರವು ಯಾವುದೇ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು. ಜಾತಿ, ಮತ, ಧರ್ಮ ಬೇದವಿಲ್ಲದೆ ಸರ್ವರಿಗೂ ಉಚಿತ ಶಿಕ್ಷಣ ನೀಡುವ ಕಾರ್ಯಕ್ಕೆ ಮುಂದಾಗಿದೆ ಎಂದರು.ಬಾಲ್ಯದಿಂದಲೇ ಸಂಸ್ಕಾರಗಳನ್ನು ಪಡೆಯುವುದು ಉತ್ತಮ. ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಮೌಲ್ಯಯುತ ಶಿಕ್ಷಣ ಒದಗಿಸುವ ಅನಿವಾರ್ಯವಿದೆ. ಸರ್ಕಾರಿ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳು ಕೆಳಸ್ತರದವರಲ್ಲ. ಸರ್ಕಾರಿ ಶಾಲೆಗಳಲ್ಲಿ ಓದಿದ ಹಲವಾರು ಮಂದಿ ಖ್ಯಾತನಾಮರಾಗಿದ್ದಾರೆ. ಉತ್ತಮ ಪದವಿ ಹೊಂದಿದ್ದಾರೆ. ಸರ್ಕಾರಿ ಶಾಲೆಗಳನ್ನು ತುಚ್ಛವಾಗಿ ಕಾಣದೆ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಿ ಸರ್ಕಾರಿ ಶಾಲೆಗಳನ್ನು ಪುನರ್‌ಚೇತನಗೊಳಿಸುವಂತಾಗಬೇಕು ಎಂದರು.
ವಿರಾಜಪೇಟೆ ಪುರಸಭೆ ಸದಸ್ಯ ಮನೆಯಪಂಡ ದೇಚಮ್ಮ ಕಾಳಪ್ಪ ಮತ್ತು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಡಿ.ಪಿ. ರಾಜೇಶ್ ಪದ್ಮನಾಭ ಮಾತನಾಡಿದರು.
ಸುಮಾರು 40 ವಿದ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ವಿರಾಜಪೇಟೆ ಸಂತ ಅನ್ನಮ್ಮ ಶಾಲೆ ದೈಹಿಕ ಶಿಕ್ಷಕರಾದ ಶಬರೀಶ್ ಅವರನ್ನು ಸನ್ಮಾನಿಸಲಾಯಿತು.