ವಿಕಸಿತ ಭಾರತ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ: ಶೋಭಾ ಕರಂದ್ಲಾಜೆ

KannadaprabhaNewsNetwork |  
Published : Dec 10, 2023, 01:30 AM IST
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಿದರು. | Kannada Prabha

ಸಾರಾಂಶ

ಸರ್ಕಾರದ ಯೋಜನೆಗಳನ್ನು ತಲುಪದೇ ಇದ್ದವರಿಗೆ ತಲುಪಿಸುವುದು, ಅವಶ್ಯಕತೆ ಇದ್ದವರ ಮನೆ ಬಾಗಿಲಲ್ಲಿ ಒದಗಿಸುವುದು, ಯೋಜನೆಗಳ ಅನುಷ್ಠಾನದಲ್ಲಿ ಮಾಹಿತಿ ಕೊರತೆಯಿಂದ ಆಗುವ ತೊಡಕುಗಳನ್ನು ನಿವಾರಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಉದ್ದಿಮೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಸರ್ಕಾರದ ಯೋಜನೆಗಳನ್ನು ತಲುಪದೇ ಇದ್ದವರಿಗೆ ತಲುಪಿಸುವುದು, ಅವಶ್ಯಕತೆ ಇದ್ದವರ ಮನೆ ಬಾಗಿಲಲ್ಲಿ ಒದಗಿಸುವುದು, ಯೋಜನೆಗಳ ಅನುಷ್ಠಾನದಲ್ಲಿ ಮಾಹಿತಿ ಕೊರತೆಯಿಂದ ಆಗುವ ತೊಡಕುಗಳನ್ನು ನಿವಾರಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಉದ್ದಿಮೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಶನಿವಾರ ಇಲ್ಲಿನ ತೋನ್ಸೆಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ 2047ರ ವೇಳೆ ಭಾರತವನ್ನು ಜಗತ್ತಿನ ದೊಡ್ಡಣ್ಣನಾಗಿ ಮಾಡುವ ಸಂಕಲ್ಪ ಹೊಂದಿದ್ದಾರೆ. ಅದಕ್ಕಾಗಿ ಕೇಂದ್ರ ಸರ್ಕಾರದ ಯೋಜನೆಗಳನ್ನು ನಿಜವಾದ ಫಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಿರ್ವಹಿಸಿದರೆ 2047ರಲ್ಲಿ ಭಾರತ ವಿಕಸಿತವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ತೊನ್ಸೆ ಪಂಚಾಯಿತಿ ಅಧ್ಯಕ್ಷೆ ಕುಸುಮ, ಉಪಾಧ್ಯಕ್ಷ ಅರುಣ್, ಕೆನರಾ ಬ್ಯಾಂಕಿನ ಪ್ರಾದೇಶಿಕ ಪ್ರಬಂಧಕಿ ಶೀಲಾ ಸಾಜನ್, ದೂರದರ್ಶನದ ಉಪನಿರ್ದೇಶಕ (ಸುದ್ದಿ) ಯಶವಂತ್, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಡಾ.ಧನಂಜಯ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಫಲಾನುಭವಿಗಳೊಂದಿಗೆ ನಡೆಸಿದ ಸಂವಾದದ ನೇರಪ್ರಸಾರವನ್ನು ಅತಿಥಿಗಳು ಮತ್ತು ಸಾರ್ವಜನಿಕರು ವೀಕ್ಷಿಸಿದರು. ನಂತರ ವಿಕಸಿತ ಭಾರತ ಸಂಕಲ್ಪ ಪ್ರತಿಜ್ಞೆಯನ್ನು ತೆಗೆದುಕೊಳ್ಳಲಾಯಿತು. ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ಸ್ಥಳದಲ್ಲಿಯೇ ನೀಡಲಾಯಿತು. ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ನವರು ಕೀಟನಾಶಕ ಹಾಗೂ ಸೂಕ್ಷ್ಮ ಪೋಷಕಾಂಶಗಳ ಸಿಂಪರಣೆಗೆ ಡ್ರೋನ್ ಬಳಕೆಯ ಕುರಿತ ಪ್ರಾತ್ಯಕ್ಷಿಕೆ ನಡೆಯಿತು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ