ಭವ್ಯ ಭಾರತದ ನಿರ್ಮಾಣ ಮತ್ತು ರಕ್ಷಣೆಯ ಹೊಣೆ ಇಂದಿನ ಯುವಪೀಳಿಗೆಯ ಮೇಲಿದೆ. ಸುಶಿಕ್ಷಿತ, ಸುಭದ್ರ ಸಮಾಜ ನಿರ್ಮಾಣಕ್ಕೆ ಯುವಜನರು ಕಾನೂನು ಅರಿವು ಬೆಳೆಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು.
ಕಲಘಟಗಿ:
ಭವ್ಯ ಭಾರತದ ನಿರ್ಮಾಣ ಮತ್ತು ರಕ್ಷಣೆಯ ಹೊಣೆ ಇಂದಿನ ಯುವಪೀಳಿಗೆಯ ಮೇಲಿದೆ. ಸುಶಿಕ್ಷಿತ, ಸುಭದ್ರ ಸಮಾಜ ನಿರ್ಮಾಣಕ್ಕೆ ಯುವಜನರು ಕಾನೂನು ಅರಿವು ಬೆಳೆಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ ಹೇಳಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ''''''''ಜಾಗೃತಿ'''''''' ಯೋಜನೆಯಡಿ ಯುವಜನರಿಗೆ ಆಯೋಜಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರು ಕಾನೂನಿನ ಮೂಲಭೂತ ಜ್ಞಾನ ಹೊಂದಿರಬೇಕು. ವಾಹನ ಚಾಲನೆ ಮಾಡುವಾಗ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. 18 ವರ್ಷ ತುಂಬುವ ಮೊದಲಿನ ಹೆಣ್ಣುಮಕ್ಕಳು ವಿಶೇಷ ಜಾಗ್ರತೆ ವಹಿಸಬೇಕು. ಸಮಾಜದ ಸುರಕ್ಷತೆ ಮತ್ತು ಸುವ್ಯವಸ್ಥೆಗಾಗಿ ಹಲವು ಕಾನೂನುಗಳನ್ನು ರೂಪಿಸಲಾಗಿದ್ದು, ಅವುಗಳ ಅರಿವು ಪ್ರತಿಯೊಬ್ಬರಿಗೂ ಇರಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಲ್ಲಿ ತಂದೆ-ತಾಯಿಯರ ಪಾತ್ರ ಮಹತ್ವದ್ದಾಗಿದೆ. ಎಲ್ಲರೂ ಸಂವಿಧಾನವನ್ನು ಗೌರವಿಸಿ ಅದರ ಆಶಯಗಳಿಗೆ ಬದ್ಧರಾಗಿರಬೇಕು ಎಂದರು.
ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ. ವಿಜಯ್ ಮಾತನಾಡಿ, ನ್ಯಾಯ ವೃತ್ತಿಯಲ್ಲಿ ತೊಡಗಿರುವವರು ಸಾಮಾಜಿಕ ಕಳಕಳಿಯೊಂದಿಗೆ ಕಕ್ಷಿದಾರರ ಹಿತರಕ್ಷಣೆ ಮಾಡಬೇಕು ಎಂದರು.
ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯ ಬಿ.ವಿ. ಕೋರಿಮಠ ಮಾತನಾಡಿದರು. ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಲ್ಲಪ್ಪ ಬಡಿಗೇರ, ಹಿರಿಯ ನ್ಯಾಯಾಧೀಶ ರವೀಂದ್ರ ಎಲ್. ಹೊನೋಲೆ, ದಿವಾಣಿ ನ್ಯಾಯಾಧೀಶ ಸಂಜೀವಕುಮಾರ ಜಿ, ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ-ಕಿರಿಯ ವಕೀಲರು, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.