ಕನ್ನಡಪ್ರಭ ವಾರ್ತೆ ಉಡುಪಿ
ಶಿಬಿರವನ್ನು ಉದ್ಘಾಟಿಸಿದ ಮಲ್ಪೆಯ ವೈದ್ಯಾಧಿಕಾರಿ ಡಾ.ಜೇಸ್ಮಾ ಸ್ಟೇಲ್ಲಾ ಪಿಕಾರ್ಡೋ ಮಾತನಾಡಿ, ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಸಂಘ ಸಂಸ್ಥೆಗಳ ಪಾತ್ರ ಹಿರಿದು. ವಿಶೇಷವಾಗಿ ಮಹಿಳೆಯರು ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ನೀವು ಆರೋಗ್ಯವಂತರಾಗಿದ್ದರೆ ಇಡೀ ಕುಟುಂಬವೇ ಆರೋಗ್ಯವಾಗಿರುತ್ತದೆ ಎಂದರು.
ತಂಬಾಕು ನಿಯಂತ್ರಣ ಜಿಲ್ಲಾ ಸಮಾಲೋಚಕರಾದ ಮಂಜುಳಾ ಶೆಟ್ಟಿ ಮಾಹಿತಿ ನೀಡಿದರು. ಸಭಾಧ್ಯಕ್ಷತೆಯನ್ನು ಸುಮನಸಾ ಕೊಡವೂರು ಅಧ್ಯಕ್ಷ ಪ್ರಕಾಶ್ ಜಿ.ಕೊಡವೂರು ವಹಿಸಿಕೊಂಡಿದ್ದರು.ವೇದಿಕೆಯಲ್ಲಿ ಬ್ರಾಹ್ಮಣ ಮಹಾಸಭಾ ಕೊಡವೂರು ಅಧ್ಯಕ್ಷ ಸುರೇಂದ್ರ ಉಪಾಧ್ಯಾಯ, ಉದ್ಯಮಿಗಳಾದ ರತ್ನಾಕರ್ ಅಮೀನ್, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣ ದೇವಾಡಿಗ, ದುರ್ಗಾ ಮಹಿಳಾ ಮಂಡಲ ಅಧ್ಯಕ್ಷೆ ಮೀನಾಕ್ಷಿ ಮಾಧವ, ಸುಮನಸಾ ಗೌರವಾಧ್ಯಕ್ಷ ಎಂ.ಎಸ್.ಭಟ್, ಸುಮನಸಾ ಸಂಚಾಲಕ ಭಾಸ್ಕರ್ ಪಾಲನ್ ಬಾಚನಬೈಲ್, ಡಾ.ಸುಯೋಗ್, ಡಾ.ವೈಭವ್, ಡಾ.ತಪಸ್ ಹಾಗೂ ಮೈತ್ರಿ ಉಪಸ್ಥಿತರಿದ್ದರು.