ಪೌಷ್ಟಿಕ ಆಹಾರದಿಂದ ಆರೋಗ್ಯವಂತ ಪೀಳಿಗೆ ನಿರ್ಮಾಣ: ಯಲ್ಲಮ್ಮ

KannadaprabhaNewsNetwork |  
Published : Oct 05, 2026, 02:30 AM IST
ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಗ್ರಾಮದಲ್ಲಿ ಪೋಷಣ್ ಮಾಸಾಚರಣೆ ನಡೆಯಿತು. | Kannada Prabha

ಸಾರಾಂಶ

ಗರ್ಭಿಣಿಯರು ಹಾಗೂ ಬಾಣಂತಿಯರ ಆರೋಗ್ಯ ರಕ್ಷಣೆ ಮತ್ತು ಕುಟುಂಬಗಳಲ್ಲಿ ಪೌಷ್ಟಿಕ ಆಹಾರದ ಕುರಿತು ಜಾಗೃತಿ ಮೂಡಿಸುವುದು ಪೋಷಣ್ ಅಭಿಯಾನದ ಉದ್ದೇಶವಾಗಿದೆ

ಕುಷ್ಟಗಿ: ಮಕ್ಕಳ ಅಪೌಷ್ಟಿಕತೆ ನಿವಾರಿಸಿ ಆರೋಗ್ಯವಂತ ಪೀಳಿಗೆ ರೂಪಿಸುವಲ್ಲಿ ಪೌಷ್ಟಿಕ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಜತೆಗೆ ಗರ್ಭಿಣಿಯರು ಹಾಗೂ ಬಾಣಂತಿಯರ ಆರೋಗ್ಯದ ಬಗ್ಗೆಯೂ ಕುಟುಂಬಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಿಡಿಪಿಒ ಯಲ್ಲಮ್ಮ ಹೇಳಿದರು.

ತಾಲೂಕಿನ ಕ್ಯಾದಿಗುಪ್ಪ ಗ್ರಾಮದಲ್ಲಿ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ಥಳೀಯವಾಗಿ ದೊರೆಯುವ ಸೊಪ್ಪು, ತರಕಾರಿ, ಬೇಳೆ, ಮೊಟ್ಟೆ, ಹಾಲು, ಸಿರಿಧಾನ್ಯ ಸೇರಿದಂತೆ ಪೌಷ್ಟಿಕ ಆಹಾರ ಸೇವಿಸುವ ಮೂಲಕ ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಬೇಕು. ಮಕ್ಕಳ ಸಮರ್ಪಕ ಬೆಳವಣಿಗೆಗೆ ಪೌಷ್ಟಿಕ ಆಹಾರ, ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆ ಪೋಷಕರು ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪೋಷಣ್ ಅಭಿಯಾನ ಸಂಯೋಜಕಿ ಭಾಗ್ಯಶ್ರೀ ಹೊಸಮನಿ, ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆ, ಗರ್ಭಿಣಿಯರು ಹಾಗೂ ಬಾಣಂತಿಯರ ಆರೋಗ್ಯ ರಕ್ಷಣೆ ಮತ್ತು ಕುಟುಂಬಗಳಲ್ಲಿ ಪೌಷ್ಟಿಕ ಆಹಾರದ ಕುರಿತು ಜಾಗೃತಿ ಮೂಡಿಸುವುದು ಪೋಷಣ್ ಅಭಿಯಾನದ ಉದ್ದೇಶವಾಗಿದೆ ಎಂದರು. ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳ ತೂಕ, ಬೆಳವಣಿಗೆ ಹಾಗೂ ಆರೋಗ್ಯದ ಮೇಲ್ವಿಚಾರಣೆ ನಡೆಸಲಾಗುತ್ತಿದ್ದು, ಇದರ ಸೇವೆಗಳನ್ನು ಪೋಷಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಕ್ಕಳಿಗೆ ಅನ್ನಪ್ರಾಶನ ಹಾಗೂ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನೆರವೇರಿಸಲಾಯಿತು.

ಮುಖಂಡರಾದ ಪವಾಡಗೌಡ ಪೊಲೀಸ್ ಪಾಟೀಲ್, ದೊಡ್ಡಪ್ಪ ಬಿಂಜವಾಡಗಿ, ಬಸವರಾಜ ಪೂಜಾರಿ, ದೋಟಿಹಾಳ ಎ ವಲಯದ ಮೇಲ್ವಿಚಾರಕಿ ಭುವನೇಶ್ವರಿ, ದೋಟಿಹಾಳ ಬಿ ವಲಯದ ಮೇಲ್ವಿಚಾರಕಿ ನಾಗಮ್ಮ ಗುಂಡೂರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉತ್ತಮ ಜೀವನ ಸಹಕಾರ ಸಂಘ ವಾರ್ಷಿಕ ಮಹಾಸಭೆ
ಸಮಸ್ಯೆಗಳಿಗೆ ಕಾಲಮಿತಿಯ ಪರಿಹಾರ: ಮಂತರ್‌ ಗೌಡ