ಸಂಗೀತದಿಂದ ಆರೋಗ್ಯವಂತ ಸಮಾಜ ನಿರ್ಮಾಣ: ಕಿರಣ್‌ ಕುಮಾರ್‌ ಕೊಡ್ಗಿ

KannadaprabhaNewsNetwork |  
Published : Aug 30, 2025, 01:01 AM IST
29ಸಂಗೀತ | Kannada Prabha

ಸಾರಾಂಶ

ಭಂಡಾರ್ಕಾರ್ಸ್‌ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಹಾಗೂ ಕಾಲೇಜಿನ ಐ.ಕ್ಯೂ.ಎ.ಸಿ. ಸಹಯೋಗದಿಂದ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ‘ಹಾಡಿರೇ ರಾಗಗಳ ತೂಗಿರೇ ದೀಪಗಳ’ ಸಂಗೀತ ಗಾಯನ ಕಾರ್ಯಕ್ರಮ ನೆರವೇರಿತು.

ಕುಂದಾಪುರ: ಸಂಗೀತವು ಭಾರತೀಯ ಸಂಸ್ಕೃತಿಯನ್ನು ಬೆಳೆಸುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುತ್ತದೆ ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ.ಇಲ್ಲಿನ ಭಂಡಾರ್ಕಾರ್ಸ್‌ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಹಾಗೂ ಕಾಲೇಜಿನ ಐ.ಕ್ಯೂ.ಎ.ಸಿ. ಸಹಯೋಗದಿಂದ ನಡೆದ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ

‘ಹಾಡಿರೇ ರಾಗಗಳ ತೂಗಿರೇ ದೀಪಗಳ’ ಸಂಗೀತ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜು ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷ ಶಾಂತರಾಮ ಪ್ರಭು ಮಾತನಾಡಿ, ಸಂಗೀತ ಕಲೆಯು ಸಮಸ್ತ ಜೀವ ರಾಶಿಯನ್ನು ತನ್ನತ್ತ ಸೆಳೆಯುವುದರ ಜೊತೆಗೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ಮಾತನಾಡಿ, ಭಾರತದಲ್ಲಿ ಸಂಗೀತ ಉನ್ನತ ಮಟ್ಟದಲ್ಲಿದ್ದು, ಪ್ರಪಂಚದ ಎಲ್ಲಾ ಸಂಗೀತಕ್ಕಿಂತಲೂ ಭಾರತದ ಸಂಗೀತಕ್ಕೆ ಮೌಲ್ಯ ಹೆಚ್ಚು. ಹೆಚ್ಚಿನ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಮೊದಲಿನಿಂದಲೂ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಕಲ್ಪಿಸಿಕೊಂಡು ಬರಲಾಗುತ್ತಿದೆ ಎಂದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲಾವಿದರಿಗೆ ಅಭಿನಂದನಾ ಪತ್ರ ವಿತರಿಸಲಾಯಿತು. ಕಾಲೇಜಿನ ಐ.ಕ್ಯೂ.ಎ.ಸಿ ಸಂಯೋಜಕ ಸತ್ಯನಾರಾಯಣ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಜಿ.ಎಮ್.ಗೊಂಡ ಮತ್ತಿತರರು ಉಪಸ್ಥಿತರಿದ್ದರು.

ಸರೋಜ ಮತ್ತು ತಂಡ ಪಾಡ್ದನದ ಹಾಡುಗಳು, ಸ್ವಪ್ನರಾಜ್ ಹಾಗೂ ತಂಡ ಹಿಂದೂಸ್ತಾನಿ ಗಾಯನ, ಜಯಲಕ್ಷ್ಮಿ ಮತ್ತು ತಂಡ ಸೋಬಾನೆ ಪದಗಳು, ನವೀನ್ ಕೋಟ ಮತ್ತು ತಂಡ ಯಕ್ಷಗಾನ ಪದಗಳು, ರಮೇಶ್.ಬಿ ನಿಟ್ಟೆ ಮತ್ತು ತಂಡ ಸುಗಮ ಸಂಗೀತ, ಸುಬ್ಬಣ್ಣ ಕೋಣಿ ಮತ್ತು ತಂಡ ಜನಪದ ಗೀತೆಗಳು, ವಸಂತಿ ಕಡಂಬಳ ಮತ್ತು ತಂಡ ದಾಸರ ಪದಗಳು, ಶಂಕರ್‌ದಾಸ್ ಚಂಡ್ಕಳ ಮತ್ತು ತಂಡ ರಂಗ ಗೀತೆಗಳು ಹಾಗೂ ರಮೇಶ್ ಮಹಾಂತ ಮತ್ತು ತಂಡ ವಚನ ಗೀತೆಗಳನ್ನು ಪ್ರಸ್ತುತ ಪಡಿಸಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಅಕ್ಷಯ್ ಹೆಗ್ಡೆ ಮೊಳಹಳ್ಳಿ ನಿರೂಪಿಸಿ ವಂದಿಸಿದರು.

PREV

Recommended Stories

ಜಿಎಸ್ಟಿ ಸ್ಲ್ಯಾಬ್‌ ಕಡಿತದಿಂದ 2.5 ಲಕ್ಷ ಕೋಟಿ ರು. ನಷ್ಟ
ಯುದ್ಧಪೀಡಿತ ಉಕ್ರೇನಿಯರಿಗೆ ಆರ್ಟ್ ಆಫ್ ಲಿವಿಂಗ್ ಆಸರೆ