ಕನ್ನಡಪ್ರಭ ವಾರ್ತೆ ಹೊಸದುರ್ಗ
ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು ಎನ್ನುವ ಉದ್ದೇಶದಿಂದ ರಾಜ್ಯಸರ್ಕಾರ
ಈ ಯೋಜನೆಯನ್ನು ಜಾರಿಗೆ ತಂದಿದೆ. ತಾಲೂಕಿನ ಚಿಕ್ಕತೆಕಲವಟ್ಟಿ ಗ್ರಾಮದ ವೇದಾವತಿ ಸ್ವಸಹಾಯ ಸಂಘವು ಅಕ್ಕ ಕೆಫೆಯನ್ನು ನಿರ್ವಹಣೆ ಮಾಡಲಿದೆ. ಗುಣಮಟ್ಟದ ಆಹಾರ ಜೊತೆಗೆ ಕೈಗೆಟುಕುವ ದರದಲ್ಲಿ ಉಪಹಾರ ನೀಡಲಿದ್ದಾರೆ. ಪ್ರಸ್ತುತ ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಗಳನ್ನು ಮಹಿಳಾ ಕೇಂದ್ರೀತವಾಗಿ ಜಾರಿಗೆ ತಂದು ಅನುಷ್ಠಾನಗೊಳಿಸಲಾಗಿದೆ. ಇದರಿಂದಾಗಿ ಮಹಿಳೆಯರ ಆರ್ಥಿಕ ಶಕ್ತಿ ಹೆಚ್ಚಾಗಿದೆ ಎಂದರು.ಜಿಪಂ ಸಿಇಒ ಡಾ.ಆಕಾಶ್ ಮಾತನಾಡಿ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ನಿರ್ಮಾಣವಾಗುತ್ತಿರುವ ಅಕ್ಕ ಕೆಫೆ, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರ ಆತ್ಮವಿಶ್ವಾಸ ಹೆಚ್ಚಿಸಲು ಮತ್ತು ಅವರಿಗೆ ಸುಸ್ಥಿರ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಸ್ಥಳೀಯ ಗ್ರಾಮೀಣ ಮಹಿಳೆಯರೇ ಮುನ್ನಡೆಸಲಿರುವ ಈ ಉಪಹಾರ ಕೇಂದ್ರದಲ್ಲಿ ಸಾರ್ವಜನಿಕರಿಗೆ ಶುಚಿ-ರುಚಿಯಾದ ಹಾಗೂ ಸಾಂಪ್ರದಾಯಿಕ ಆಹಾರ ಪದಾರ್ಥಗಳು ಅತ್ಯಂತ ಕೈಗೆಟುಕುವ ದರದಲ್ಲಿ ಸಿಗಲಿವೆ ಎಂದರು.