ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಗುರಿ: ಚಂದ್ರಶೇಖರ

KannadaprabhaNewsNetwork |  
Published : Aug 02, 2025, 12:00 AM IST
ಕಾರ್ಯಕ್ರಮವನ್ನ ಚಂದ್ರಶೇಖರ ಬಿ.ಕಂದಕೂರ ಉದ್ಘಾಟಿಸಿದರು. | Kannada Prabha

ಸಾರಾಂಶ

ದೇಹ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಯಾವುದೇ ಚಟವನ್ನು ವ್ಯಸನ ಎನ್ನಲಾಗುತ್ತದೆ. ಇಂತಹ ವ್ಯಸನಗಳಿಂದ ದೂರವಿರುವ ಮೂಲಕ ಸಮಾಜವನ್ನು ವ್ಯಸನ ಮುಕ್ತವಾಗಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.

ರೋಣ: ದೇಹ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವ ಯಾವುದೇ ಚಟವನ್ನು ವ್ಯಸನ ಎನ್ನಲಾಗುತ್ತದೆ. ಇಂತಹ ವ್ಯಸನಗಳಿಂದ ದೂರವಿರುವ ಮೂಲಕ ಸಮಾಜವನ್ನು ವ್ಯಸನ ಮುಕ್ತವಾಗಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ ಹೇಳಿದರು.ಪಟ್ಟಣದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ ಡಾ. ಮಹಾಂತ ಶಿವಯೋಗಿಯವರ ಜನ್ಮ ದಿನಾಚರಣೆಯ ಅಂಗವಾಗಿ ತಾಲೂಕು ಮಟ್ಟದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಮದ್ಯಪಾನ, ಧೂಮಪಾನ, ಮಾದಕ ದ್ರವ್ಯಗಳ ಸೇವನೆಯಂತಹ ದುಶ್ಚಟಗಳು ದೇಹದ ಜೊತೆಗೆ ಮನಸ್ಸಿನ ಮೇಲೆ ದೀರ್ಘಕಾಲೀನ ದುಷ್ಪರಿಣಾಮ ಬೀರುತ್ತವೆ. ಇವುಗಳಿಂದ ದೂರವಿರುವುದರ ಜೊತೆಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಯುವಕರು ಭಾಗಿಯಾಗಬೇಕು ಎಂದರು.

ಸಹಾಯಕ ಆರೋಗ್ಯ ಅಧಿಕಾರಿ ಕೆ.ಎ. ಹಾದಿಮನಿ ಮಾತನಾಡಿ, ವ್ಯಸನ ಮುಕ್ತ ಸಮಾಜವು ಕೇವಲ ಕನಸಲ್ಲ, ಅದನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಸಾಧಿಸಬಹುದು. ಇದಕ್ಕಾಗಿ ಯುವಕರು ಮುಂಚೂಣಿಯಲ್ಲಿ ನಿಲ್ಲಬೇಕು ಎಂದರು.

ಈ ವೇಳೆ ತಾಲೂಕು ಆರೋಗ್ಯ ಇಲಾಖೆಯ ಅಧಿಕಾರಿ ಡಾ. ಬಸವರಾಜ ಭಜಂತ್ರಿ, ಸಹಾಯಕ ಅರೋಗ್ಯ ಅಧಿಕಾರಿ ಕೆ.ಎ. ಹಾದಿಮನಿ, ಉಪ ತಹಸೀಲ್ದಾರ್‌ ಗಣೇಶ ಕೊಪ್ಪದ, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ ಆಲೂರ ಸೇರಿದಂತೆ ಹಲವು ಗಣ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ