ಸಮ-ಸಮಾಜ ನಿರ್ಮಾಣ ನನ್ನ ಉದ್ದೇಶ: ಶಿವಗಂಗಾ

KannadaprabhaNewsNetwork |  
Published : Oct 27, 2026, 01:45 AM IST
ಪಟ್ಟಣದ ವಾಲ್ಮೀಕಿ ಭವನದಲ್ಲಿ ತಾಲೂಕು ಆಡಳಿತ, ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ, ಪುರಸಭೆಯ ವತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿದ ಶಾಸಕ ಬಸವರಾಜು ವಿ.ಶಿವಗಂಗಾ | Kannada Prabha

ಸಾರಾಂಶ

Building an egalitarian society is my objective: Shivaganga

-ವಾಲ್ಮೀಕಿ ಜಯಂತಿ

-ಚನ್ನಗಿರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಉದ್ಘಾಟನೆಕನ್ನಡಪ್ರಭ ವಾರ್ತೆ ಚನ್ನಗಿರಿ

ವಾಲ್ಮೀಕಿ ನಾಯಕ ಸಮಾಜವು ಶೌರ್ಯ, ಪರಾಕ್ರಮಗಳಿಗೆ ಹೆಸರುವಾಸಿ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಈ ಸಮಾಜ ಸಂಪೂರ್ಣ ಬೆಂಬಲ ನೀಡಿ ನನ್ನನ್ನು ಶಾಸಕನನ್ನಾಗಿ ಮಾಡಿದೆ ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದರು.

ಅವರು ಸೋಮವಾರ ವಾಲ್ಮೀಕಿ ಭವನದಲ್ಲಿ ತಾಲೂಕು ಆಡಳಿತ, ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ, ಪುರಸಭೆಯ ವತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು. ಸಮ-ಸಮಾಜದ ನಿರ್ಮಾಣದ ಪರಿಕಲ್ಪನೆ ಇಟ್ಟುಕೊಂಡಿರುವ ನಾನು, ನಿಮ್ಮ ಋಣ ತೀರಿಸುತ್ತೇನೆ ಎಂದರು.

ವಾಲ್ಮೀಕಿ ಭವನದ ಅಭಿವೃದ್ಧಿಗೆ ಈಗಾಗಲೇ ₹40 ಲಕ್ಷ ಅನುದಾನವನ್ನು ನೀಡಿದ್ದು, ಇನ್ನುಳಿದ ಕಾಮಗಾರಿಗಳಿಗೆ ಬೇಕಾದ ಅನುದಾನವನ್ನು ಬಿಡುಗಡೆಗೊಳಿಸುವುದಾಗಿ ಹೇಳಿದರು.

ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯದ ನಿರ್ಮಾಣಕ್ಕೆ ಬೇಕಾದ ನಿವೇಶನವನ್ನು ಈಗಾಗಲೇ ಗುರುತಿಸಿದ್ದು, ಅದನ್ನು ಮಂಜೂರಾತಿಗೆ ಈ ದಿನದಿಂದಲೇ ಕಾರ್ಯ ಪ್ರವೃತ್ತನಾಗುತ್ತೇನೆ ಎಂದರು.

ಪರಿಶಿಷ್ಟ ಪಂಗಡಕ್ಕೆ ಈ ಹಿಂದೆ ನೀಡಿದ್ದ ಮೀಸಲಾತಿ ರದ್ದುಗೊಳಿಸಿದ್ದು ಈ ಮೀಸಲಾತಿ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕಾಗಿದ್ದು, ಬಿಜೆಪಿ ಸಂಸದರಿಗೆ ಸಮಾಜದ ಮುಖಂಡರು ಮನವರಿಕೆ ಮಾಡಿಕೊಡಬೇಕು. ನಿಮ್ಮೊಂದಿಗೆ ನಾನು ಸಹ ಬರುತ್ತೇನೆ ಎಂದರು.

ವಾಲ್ಮೀಕಿ ವೃತ್ತ ನಿರ್ಮಾಣ ಮಾಡಲು ಬೇಕಾದ ಎಲ್ಲ ರೀತಿಯ ಸಹಕಾರ ನೀಡಲಿದ್ದು, ಈ ಬಗ್ಗೆ ಸಂಬಂಧಪಟ್ಟ ಸಚಿವರೊಂದಿಗೆ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದರು.

ಎಲ್ಲಾ ಸಮುದಾಯಗಳ ಪ್ರೀತಿ ಗಳಿಸಿ ಸಮ-ಸಮಾಜ ನಿರ್ಮಿಸುವುದು ನನ್ನ ಉದ್ದೇಶವಾಗಿದೆ ಎಂದರು.

ತಾಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಹೊದಿಗೆರೆ ರಮೇಶ್ ಮಾತನಾಡಿ, ರಾಜ್ಯದಲ್ಲಿ ಸುಮಾರು 80ಲಕ್ಷ ಜನಸಂಖ್ಯೆ ಹೊಂದಿರುವ ವಾಲ್ಮೀಕಿ ನಾಯಕ ಸಮಾಜಕ್ಕೆ ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ನಮ್ಮ ಸಮಾಜದ ಸ್ವಾಮೀಜಿ ರಾಜನಹಳ್ಳಿಯಿಂದ ರಾಜಧಾನಿಯವರೆಗೆ ಪಾದಯಾತ್ರೆ ನಡೆಸಿ 287 ದಿನಗಳ ಕಾಲ ಹೋರಾಟ ಮಾಡಿದ್ದರ ಪ್ರತಿಫಲವಾಗಿ ಈ ಹಿಂದೆ ಇದ್ದ ರಾಜ್ಯ ಸರ್ಕಾರ ಶೇ. 7 ರಷ್ಟು ಮೀಸಲಾತಿ ನೀಡಿತ್ತು. ಆದರೆ, ಈ ಮೀಸಲಾತಿಗೆ ಕಾನೂನಿನ ರಕ್ಷಣೆ ಸಿಗದೆ ಮೀಸಲಾತಿ ರದ್ದಾಗಿರುವುದು ಖಂಡನೀಯ ಎಂದು ತಮ್ಮ ಅಸಮಾಧಾನ ವ್ಯಕ್ತ ಪಡಸಿದರು.

ರಾಜ್ಯದಲ್ಲಿರುವ ಎಲ್ಲಾ ಪಕ್ಷಗಳ ನಾಯಕರನ್ನು ಒಳಗೊಂಡ ಸರ್ವ ಪಕ್ಷಗಳ ನಿಯೋಗ, ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವ ಅನಿವಾರ್ಯತೆ ಇದೆ ಎಂದರು.

ಜೀವ ವೈವಿದ್ಯ ನಿಗಮದ ಅಧ್ಯಕ್ಷ ವಡ್ನಾಳ್ ಜಗದೀಶ್ ಮಾತನಾಡಿ, ಶ್ರೀ ರಾಮನ ಇರುವಿಕೆಯನ್ನು ಜಗತ್ತಿಗೆ ಪರಿಚಯಿಸಿದ ವ್ಯಕ್ತಿ ವಾಲ್ಮೀಕಿಗಳಾಗಿದ್ದು ಅವರು ವ್ಯಕ್ತಿಯಲ್ಲ ಶಕ್ತಿಯಾಗಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಪರಿಶಿಷ್ಠ ಪಂಗಡಕ್ಕೆ ನೀಡಿದ್ದ ಶೇ. 7 ರಷ್ಟು ಮೀಸಲಾತಿಯನ್ನು ರದ್ದುಪಡಿಸಿರುವುದನ್ನು ಮರು ಪರಿಶೀಲನೆ ನಡೆಸಿ ಜಾರಿಗೊಳಿಸುವಂತೆ ಕೇಂದ್ರಕ್ಕೆ ಶಿಫಾರಸು ಸಲ್ಲಿಸುವಂತೆ ಶಾಸಕರಿಗೆ ಮನವಿಯನ್ನು ಸಲ್ಲಿಸಲಾಯಿತು.

ಮೆರವಣಿಗೆ:

ಸಮಾರಂಭಕ್ಕೂ ಮುನ್ನ ಪಟ್ಟಣದ ವಾಲ್ಮೀಕಿ ವೃತ್ತದಿಂದ ಮಹರ್ಷಿ ವಾಲ್ಮೀಕಿ ಮತ್ತು ರಾಜವೀರ ಮದಕರಿ ನಾಯಕರ ಭಾವಚಿತ್ರಗಳನ್ನು ಅಲಂಕೃತಗೊಂಡ ವಾಹನದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ತಹಸೀಲ್ದಾರ್‌ ಎನ್.ಜೆ. ನಾಗರಾಜ್ ವಹಿಸಿದ್ದರು. ಮಹರ್ಷಿ ವಾಲ್ಮೀಕಿ ಕುರಿತಂತೆ ಶಿಕ್ಷಕ ರುದ್ರೇಶ್ ಉಪನ್ಯಾಸ ಮಾಡಿದರು. ಮುಖ್ಯ ಅತಿಥಿಗಳಾಗಿ ತಾ.ಪಂ ಕಾರ್ಯನಿರ್ವಾಣಾಧಿಕಾರಿ ಪ್ರಕಾಶ್, ಪುರಸಭೆಯ ಮುಖ್ಯಾಧಿಕಾರಿ ಜೆ.ವಿ.ಮಂಜುನಾಥ್, ಡಿ.ವೈ.ಎಸ್.ಪಿ ರುದ್ರಪ್ಪ ಎಸ್.ಉಜ್ಜನಕೊಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಜಯಣ್ಣ, ಸಿಡಿಪಿಒ ನಿರ್ಮಲ, ಸಮಾಜದ ಪ್ರಮುಖರಾದ ಬಿ.ಪಿ.ನಾಯಕ, ಮಲಹಾಳ್ ಡಿ.ಸಿ.ಕುಮಾರಸ್ವಾಮಿ, ಮಂಗೇನಹಳ್ಳಿ ಪಿ.ಲೋಹಿತ್, ರಾಮಚಂದ್ರಮೂರ್ತಿ, ತಾಲೂಕು ಬಂಜಾರ ಸಮಾಜದ ಅಧ್ಯಕ್ಷ ಬಿ.ಎನ್.ವೀರೇಶ್ ನಾಯ್ಕ್, ಸಿ.ನಾಗರಾಜ್, ಜೋಳದಾಳ್ ಕುಮಾರ್, ಪ್ರಸನ್ನ, ಮಲಹಾಳ್ ಡಿ.ಶಶಿಧರ್, ಬಸವಾಪುರ ರಂಗನಾಥ್, ಜಯರಾಮ್, ಅಶೋಕ್, ಕುಬೇಂದ್ರಪ್ಪ, ಮೆದಿಕೆರೆ ಸಿದ್ದೇಶ್, ಜಯಣ್ಣ, ಕೃಷ್ಣಪ್ಪ, ಶೇಖರಪ್ಪ, ನಾಗರಾಜ್, ಕೊಂಡದಹಳ್ಳಿ ಜಯಣ್ಣ, ಬುಳಸಾಗರ ನಾಗರಾಜ್ ಸೇರಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಇದ್ದರು.

ಫೋಟೊ:26ಕೆಸಿಎನ್ಜಿ1

ವಾಲ್ಮೀಕಿ ಭವನದಲ್ಲಿ ತಾಲೂಕು ಆಡಳಿತ, ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ, ಪುರಸಭೆ ವತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಉದ್ಘಾಟಿಸಿದ ಶಾಸಕ ಬಸವರಾಜು ವಿ.ಶಿವಗಂಗಾ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಲ್ಮೀಕಿ ರಾಮಾಯಣದಿಂದ ಸಮಾಜಕ್ಕೆ ಸಂದೇಶ
ರುದ್ರಭೂಮಿ ಸ್ವಚ್ಛಗೊಳಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು